ಬೆಂಗಳೂರು: ರಾಜ್ಯ ಸರ್ಕಾರ ಕಲಾವಿದರಿಗೆ ಹಾಗೂ ಸಾಹಿತಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದು, ಕಲಾವಿದರಿಗೆ ನೀಡುವ ಮಾಸಾಶನಕ್ಕೆ 10 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿದೆ.
ಸಾಹಿತಿಗಳಿಗೆ, ಕಲಾವಿದರಿಗೆ ಮಾಸಾಶನ ಹಾಗೂ ವಿಧವಾ ಮಾಸಾಶನ ನೀಡಲು ಮೊದಲನೇ ಕಂತಿನಲ್ಲಿ ಸುಮಾರು 10,98,21,000 ರೂಪಾಯಿಗಳ ಅನುದಾನವನ್ನ ಬಿಡುಗಡೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ಈ ಮೊದಲು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂಪಾಯಿಗಳಿಂದ 2,500 ರೂ.ಗಳಿಗೆ ಹೆಚ್ಚಿಸುವುದಾಗಿ ಘೋಷಣೆ ಮಾಡಲಾಗಿತ್ತು, ಇದೀಗ ಅದಕ್ಕೆ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ. ಈ ಆದೇಶ ಹೊರಬಂದ ದಿನದಿಂದಲೇ ಜಾರಿ ಮಾಡಬೇಕಾಗುತ್ತದೆ.




