Ad imageAd image

ವಸತಿ ಶಾಲೆಗಳಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಶೇ. 10 ರಷ್ಟು ಮೀಸಲಾತಿ :ರಾಜ್ಯ ಸರ್ಕಾರ ಆದೇಶ

Bharath Vaibhav
ವಸತಿ ಶಾಲೆಗಳಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಶೇ. 10 ರಷ್ಟು ಮೀಸಲಾತಿ :ರಾಜ್ಯ ಸರ್ಕಾರ ಆದೇಶ
vidhan soudha
WhatsApp Group Join Now
Telegram Group Join Now

ಬೆಂಗಳೂರು : ವಿವಿಧ ವಸತಿ ಶಾಲೆಗಳಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳು ಹಾಗೂ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಸರ್ಕಾರವು ಆದೇಶ ಹೊರಡಿಸಿದೆ.

ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 826 ವಿವಿಧ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ.ಬಿ.ಆರ್ ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ, ಏಕಲವ್ಯ ಮಾದರಿ ವಸತಿ ಶಾಲೆ ಮತ್ತು ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ ಶೇ.25 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳಿಗಳಿಗೆ ಶೇ.10 ರಷ್ಟು ಮೀಸಲಾತಿಯನ್ನು ನಿಗದಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ ಸರ್ಕಾರದ ಅದೇಶ ಹೊರಡಿಸಿದೆ ಎಂದು ಬಳ್ಳಾರಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!