Ad imageAd image

ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಕೆ : ರಾಜ್ಯ ಸರ್ಕಾರ ಆದೇಶ 

Bharath Vaibhav
ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಕೆ : ರಾಜ್ಯ ಸರ್ಕಾರ ಆದೇಶ 
vidhana soudha
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಆದೇಶ ಹೊರಡಿಸಲಾಗಿರುತ್ತದೆ. ಯೋಜನೆಯ ಅನುಷ್ಠಾನವು ಈಗಾಗಲೇ ಪ್ರಾರಂಭವಾಗಿದೆ.

ಸದರಿ ಯೋಜನೆಯನ್ನು ಇನ್ನೂ ನಿಖರವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ(EDCS) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್-ಲೈನ್ನಲ್ಲಿ ದಾಖಲಿಸಬೇಕಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಶಾಲಾ ಶಿಕ್ಷಣ ಇಲಾಖೆಗೆ ಒಳಪಡುವ ಸರ್ಕಾರಿ ಶಾಲೆಗಳ schooleducation.karnataka.gov.in ನಲ್ಲಿ – ಉಚಿತ ವಿದ್ಯುತ್ ಸಂಪರ್ಕಕ್ಕೆ ಮಾಹಿತಿ ನಮೂದಿಸಲು ಇಲ್ಲಿ ಕ್ಲಿಕ್ ಮಾಡಿ ” ಎಂಬ ಸ್ಮಾಲ್ ಲಿಂಕ್ ನ್ನು ಪ್ರಕಟಿಸಲಾಗಿದ್ದು, ಸದರಿ ಲಿಂಕ್ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

ಈ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಸೇವಾ ಸಿಂಧು ಪೋರ್ಟ್ಲ್ ನ ವೆಬ್ಪೇಜ್ ತೆರೆದುಕೊಳ್ಳುತ್ತದೆ. ಈ ವೆಬ್ಪೇಜ್ನ ಮುಖಪುಟದಲ್ಲಿ ಈ ಕೆಳಕಂಡ ಕ್ರಮಗಳನ್ನು ಶಾಲೆಯ ಮುಖ್ಯಸ್ಥರು ನಿರ್ವಹಿಸಬೇಕಾಗಿರುತ್ತದೆ.

ಸಂಬಂಧಪಟ್ಟ ಸರ್ಕಾರಿ ಶಾಲೆಯ ಯು-ಡೈಸ್ ಸಂಖ್ಯೆಯನ್ನು ನಿಗದಿತ ಸ್ಥಳದಲ್ಲಿ ನಮೂದಿಸಿದಾಗ ಶಾಲೆಯ ಹೆಸರು, ವಿಳಾಸ ಮತ್ತು ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ ಹಾಗೂ ಶಾಲೆಗೆ ಸಂಬಂಧಿಸಿದ ವಿವರಗಳು ಪ್ರದರ್ಶಿತಗೊಳ್ಳುತ್ತವೆ. ಈ ವಿವರಗಳು ತಮ್ಮ ಶಾಲೆಗೆ ಸಂಬಂಧಿಸಿದವು ಎಂದು ಖಾತರಿ ಪಡಿಸಿಕೊಳ್ಳಬೇಕು.

ಸದರಿ ಯು-ಡೈಸ್ ಗೆ ಲಿಂಕ್ ಮಾಡಲಾಗಿರುವ ಮೊಬೈಲ್ ಸಂಖ್ಯೆ/ಶಾಲಾ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ OTP(One Time Password)ಯನ್ನು ನಮೂದಿಸಿ, ದಾಖಲೆಗಳನ್ನು ಪರಿಶೀಲಿಸಿ Validate ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು ಎಂದು ಪ್ರಕಟಣೆ ಹೊರಡಿಸಿದೆ.

 

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!