Ad imageAd image

ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿ ಇಂಗ್ಲಿಷ್ ಮಾಧ್ಯಮ ಆರಂಭ : ರಾಜ್ಯ ಸರ್ಕಾರ ಆದೇಶ

Bharath Vaibhav
ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿ ಇಂಗ್ಲಿಷ್ ಮಾಧ್ಯಮ ಆರಂಭ : ರಾಜ್ಯ ಸರ್ಕಾರ ಆದೇಶ
WhatsApp Group Join Now
Telegram Group Join Now

ಬೆಂಗಳೂರು : 2024-25ನೇ ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ 25 ದ್ವಿಭಾಷಾ ಮಾಧ್ಯಮದ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ಅಂಗ್ಲ ಮಾಧ್ಯಮದ (ದ್ವಿಭಾಷಾ) ವಿಭಾಗವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25 ನೇ ಸಾಲಿನಿಂದ ಉಲ್ಲೇಖಿತ ಸರ್ಕಾರಿ ಆದೇಶದ ಅನುಬಂಧದಲ್ಲಿನ 25 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ದ್ವಿಭಾಷಾ ಮಾಧ್ಯಮದ ಜೊತೆಗೆ ಹೆಚ್ಚುವರಿಯಾಗಿ ಮತ್ತೊಂದು ಆಂಗ್ಲ ಮಾಧ್ಯಮದ [ದಿಭಾಷಾ ] ವಿಭಾಗವನ್ನು ಯಾವುದೇ ಆರ್ಥಿಕ ಹೊರೆಯಾಗದಂತೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಉಲ್ಲೇಖಿತ ಆದೇಶದನ್ವಯ ಅನುಮತಿ ನೀಡಿ ಆದೇಶಿಸಲಾಗಿದೆ.

ಸರ್ಕಾರದ ಉಲ್ಲೇಖಿತ ಆದೇಶದಲ್ಲಿನ ಅಂಶಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!