ಚಾಮರಾಜನಗರ: ರಾಜ್ಯ ಕಾಂಗ್ರೆಸ್ ಸರ್ಕಾರವು ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನು ದಾನವನ್ನು ಗ್ಯಾರ೦ಟಿ ಯೋಜನೆಗಳಿಗೆ ಬಳಸಿಕೊಂಡಿದ್ದು ಕೂಡಲೇ ಆ ಹಣವನ್ನು ಹಿಂಪಡೆಯಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ ಆಗ್ರಹಿಸಿದರು.
2023-24ನೇ ಸಾಲಿನಲ್ಲಿ 14 ಸಾವಿರ ಕೋಟಿ ಹಾಗೂ 2024-25ನೇ ಸಾಲಿನಲ್ಲಿ 11 ಸ ಸಾವಿರ ಕೋಟಿ ಹಣವನ್ನು ಬೆ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ದ್ರೋಹ ಬಗೆದಿದೆ ಎಂದು ಸುದ್ದಿಗೋಷ್ಟಿಯಲ್ಲಿ ಕಿಡಿಕಾರಿದರು.
ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವನ್ನು ಬುಡಮೇಲು ಮಾಡಲು ಹೊರಟಿದ್ದ ಆರ್‌ಎಸ್ಎಸ್ ಹಾಗೂ ಬಿಜೆಪಿಯನ್ನು ಸೋಲಿಸಬೇಕೆಂಬ ಕಾರಣದಿಂದ ದಸಂಸ ಐಕ್ಯತ ಹೋರಾಟ ಸಮಿತಿಯ ಮೂಲಕ ಸಮಾವೇಶ ಮಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಲಾಗಿತ್ತು. ಎಸ್ಸಿ, ಎಸ್ಟಿ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಕಾಂಗ್ರೆಸ್ ನೀಡಿತ್ತು. ಆದರೆ, ಸಿದ್ದರಾಮಯ್ಯ ಅವರು ಹೇಳಿದಂತೆ ನಡೆದುಕೊಳ್ಳದೇ ದ್ರೋಹ ಮಾಡಿದ್ದಾರೆ ಎಂದರು. ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ, ಎಸ್ಟಿ ಹಣ ಬಳಕೆ ಮಾಡಿಕೊಂಡಿರುವ ಕುರಿತು ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಮನೆಯಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ವ್ಯತ್ಯಾಸಗಳಾದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಸಂಘಟನಾ ಸಂಚಾಲಕ ಕಂದಹಳ್ಳಿ ನಾರಾಯಣ ಮಾತನಾಡಿ, ರಾಜ್ಯ ಸರ್ಕಾರ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಹೊರಗುತ್ತಿಗೆ ನೇಮಕಾತಿಯಲ್ಲಿ ರೋಸ್ಟರ್ ಪದ್ಧತಿ ಅನುಗುಣವಾಗಿ ಮೀಸಲಾತಿ ನೀಡಬೇಕು. ಪ್ರಬುದ್ದ ಯೋಜನೆಯ ಮೂಲಕ ನೀಡುತ್ತಿರುವ ನಿರ್ವಹಣ ವೆಚ್ಚದ ಮಿತಿಯನ್ನು ಸಡಿಲಗೊಳಿಸಿ ವಾಸ್ತವ ವೆಚ್ಚವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಟಿಯಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ನಂಜುಂಡಸ್ವಾಮಿ, ಚಾಮರಾಜನಗರ ತಾಲೂಕು ಸಂಚಾಲಕ ಗೂಳಿಪುರ ಅನಿಲ್‌ಕುಮಾರ್, ಗುಂಡ್ಲುಪೇಟೆ ತಾಲೂಕು ಸಂಚಾಲಕ ರಂಗಸ್ವಾಮಿ ಮಾಡ್ರಹಳ್ಳಿ ಇದ್ದರು
ವರದಿ :ಸ್ವಾಮಿ ಬಳೇಪೇಟೆ