Ad imageAd image

ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಗೆ ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿ

Bharath Vaibhav
ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಗೆ ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿ
WhatsApp Group Join Now
Telegram Group Join Now

ಬೆಳಗಾವಿ: ಜಿಲ್ಲೆಯ ವಿಕಲಚೇತನರ ಕಲ್ಯಾಣ ಹಾಗೂ ಹಿರಿಯ ನಾಗರಿಕರ ಸಬಲೀಕರಣದ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸೋಮವಾರ(ಏ.21) ಜರುಗಿದ ಸರಕಾರಿ ನೌಕರರ ದಿನಾಚರಣೆ ಮತ್ತು ವಿವಿಧ ಸಾಲಿನ ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಪ್ರಶಸ್ತಿ ಲಭಿಸಿ ಲಭಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಅವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇಲಾಖೆಯ ಉಪ ನಿರ್ದೇಶಕರ ಮಾರ್ಗದರ್ಶನ ಮತ್ತು ಸಹಕಾರದಿಂದ ವಿಕಲಚೇತನರ ಕಲ್ಯಾಣಕ್ಕಾಗಿ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ವಿಕಲಚೇತನ ಪುರ್ನವಸತಿ ಕಾರ್ಯಕರ್ತರು, ನೋಡಲ್‌ ಅಧಿಕಾರಿಗಳು ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!