Join The Telegram | Join The WhatsApp |
ಬೆಳಗಾವಿ: ಬುಧವಾರ ದಿನಾಂಕ 07/12/22ರಂದು ನಗರದ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸಿನ ಸಮೀಕ್ಷಾ ಸಭೆಯು ನಡೆದದ್ದು ಅದರಲ್ಲಿ ರಾಷ್ಟ್ರ ರಾಜ್ಯ ಯುವ ಕಾಂಗ್ರೆಸ್ಸಿನ ಪದಾಧಿಕಾರಿಗಳು ಭಾಗಿಯಾಗಿ ಮುಂದಿನ ಕಾರ್ಯವೈಖರಿ ಬಗ್ಗೆ ಚರ್ಚಿಸಿದರು.
ಈ ಸಭೆಯಲ್ಲಿ ಮಾತನಾಡಿದ ಬಂಟಿ ಶಳ್ಕೆ ಅವರು ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂಬರುವ ಚುನಾವಣೆಗೆ ಸಜ್ಜಾಗಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.
ನಗರದ ಕಾಂಗ್ರೇಸ್ ಭವನದಲ್ಲಿ ನಡೆದ ಬೆಳಗಾವಿ ವಲಯ ಯುವ ಕಾಂಗ್ರೇಸ್ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿ ಕಾಂಗ್ರೆಸ್ ಪಕ್ಷ ಮತ್ತೆ ಆಡಳಿತಕ್ಕೆ ಬರಬೇಕು, ಅದಕ್ಕೆ ನಾವೇಲ್ಲ ಅದಕ್ಕೆ ಶ್ರಮಿಸಬೇಕು ಎಂದರು.
ಬೆಳಗಾವಿ ಜಿಲ್ಲೆಯ ಯುವ ಕಾಂಗ್ರೆಸ್ ನ ಎಲ್ಲ ಕಾರ್ಯಕರ್ತರು, ಗ್ರಾಮೀಣ ಕಾಂಗ್ರೆಸ್ಸಿನ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಯುವ ಕಾಂಗ್ರೆಸ್ ಪದಾಧಿಕಾರಿ ಕಾರ್ತಿಕ ಪಾಟೀಲ, ಬೇರೆ ಬೇರೆ ಜಿಲ್ಲೆಯ ಯುವ ಕಾಂಗ್ರೆಸ್ಸಿನ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ: ಪ್ರಕಾಶ ಕುರಗುಂದ
Join The Telegram | Join The WhatsApp |