Ad imageAd image

ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಸರ್ಕಾರದಿಂದ ಶಹಬ್ಬಾಸ್ ಗಿರಿ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ

Bharath Vaibhav
ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಸರ್ಕಾರದಿಂದ ಶಹಬ್ಬಾಸ್ ಗಿರಿ:ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಹೇಳಿಕೆ
WhatsApp Group Join Now
Telegram Group Join Now

ಭದ್ರಾವತಿ: ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಇಡೀ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಕೇಂದ್ರ ಸರ್ಕಾರ ಕೂಡ ಪೂರ್ವ ಪ್ರಾಥಮಿಕ ತರಗತಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರು ನಮ್ಮ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಹೇಳಿದರು.

ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂಥ ವ್ಯವಸ್ಥೆ ಹೊಂದಿರುವ 17,800 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ ಎಂದರು.

ಸಕ್ಷಮ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ 170 ಕೋಟಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಜೊತೆಯಾಗಿ ನಿರ್ವಹಿಸಲಾಗುವುದು ಎಂದರು.

ಡ್ಯಾಂಗಳ ಭದ್ರತೆಗೆ ಸಿಎಂ, ಡಿಸಿಎಂ ಸೂಚನೆ
ರಾಜ್ಯದ ಬಹುತೇಕ ಜಲಾಶಯಗಳು 100 ವರ್ಷ, 50 ವರ್ಷ ಪೂರೈಸಿವೆ. ಹೀಗಾಗಿ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದು ಸಹಜ. ತುಂಗಭದ್ರಾ ಡ್ಯಾಂ ಗೇಟ್‌ನ ಚೈನ್ ಕಟ್ ಆಗಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯ ಎಂದು ಹೇಳಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಎಲ್ಲಾ ಜಲಾಶಯಗಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕಾಂಗ್ರೆಸ್ ನವರು 50 ವರ್ಷದಲ್ಲಿ ಏನು ಮಾಡಿದ್ದಾರೆ ಎಂದು ಬಿಜೆಪಿ ಕೇಳುತ್ತಿದೆ. ಡ್ಯಾಂ ಕಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಡ್ಯಾಂ ದುರಸ್ತಿ ಆಗಬೇಕಿದೆ. ಎಲ್ಲಾ ಡ್ಯಾಂ ನಲ್ಲೂ ಸಣ್ಣ ಪುಟ್ಟ ಲೋಪ ಇವೆ. ಮುಂಜಾಗ್ರತಾ ಕ್ರಮ ಏನೇನು ಆಗಬೇಕೋ ಅದನ್ನು ನಮ್ಮ ಸರ್ಕಾರ ತೆಗೆದುಕೊಳ್ಳುತ್ತದೆ ಎಂದರು.

ಭಾಗ್ಯಲಕ್ಷ್ಮೀ ಬಾಂಡ್ ಸ್ಥಗಿತಗೊಂಡಿಲ್ಲ
ಭಾಗ್ಯಲಕ್ಷ್ಮಿ ಬಾಂಡ್ ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವರು ಹೇಳಿದರು.

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!