ಬೆಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ರಾಜ್ಯದ ಎಲ್ಲಾ ಜಿಲ್ಲಾನೋಂದಣಾಧಿಕಾರಿ/ಉಪನೋಂದಣಾಧಿಕಾರಿಗಳ ಕಛೇರಿಗಳನ್ನು ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ ರಾಜ್ಯ ಸರ್ಕಾರ ಅದಿಕೃತ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ:02-09-2024 ರಂದು ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದ್ದು, ಇದರ ಅಡಿ ಸಾರ್ವಜನಿಕರು ದಸ್ತಾವೇಜನ್ನು ಸ್ನಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಣಿ ಮಾಡಬಹುದಾಗಿದೆ. ಆದುದರಿಂದ ನೂತನ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ತಿಳಿಸಲಾಗಿದೆ.
ಎನಿವೇರ್ ನೋಂದಣಿಯನ್ನು ಇದೀಗ ಎಲ್ಲಾ ಜಿಲ್ಲೆಯಲ್ಲೂ ವಿಸ್ತರಿಸಲು ನಿರ್ಧರಿಸಲಾಗಿತ್ತು. ಅದರಂತೆ ಇಂದಿನಿಂದ ಜಾರಿಗೊಂಡಿದೆ. ಇದರಿಂದ ಕಚೇರಿಯಲ್ಲಿ ಜನಜಂಗುಳಿ, ಸಿಬ್ಬಂದಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡಿ ಸುಲಲಿತವಾಗಿ ಜನರಿಗೆ ನೋದಂಣಿ ಕೆಲಸ ಆಗಲು ಈ ಯೋಜನೆ ಸಹಕಾರಿಯಾಗಲಿದೆ.