Join The Telegram | Join The WhatsApp |
ಬೆಂಗಳೂರು : ರಾಜ್ಯ ಸರ್ಕಾರದ ವೈಫಲ್ಯ ಹಾಗೂ ರೈತ ವಿರೋಧಿ ನೀತಿ ವಿರೋಧಿಸಿ ವಿರುದ್ಧ ಇಂದು ( ಸೆ.8) ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲು ಬಿಜೆಪಿ ನಿರ್ಧರಿಸಿದೆ.
ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬರಗಾಲದಿಂದ ರಾಜ್ಯ ಕಂಗಾಲಾಗಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ನೋವಿಗೆ ಸ್ಪಂದಿಸುತ್ತಿಲ್ಲ.
ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಇವರ ದುರಾಡಳಿತದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.
ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಶಾಸಕರಿಗೆ ಸರ್ಕಾರ ಸರಿಯಾಗಿ ಅನುದಾನ ಕೊಡುತ್ತಿಲ್ಲ, ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದೆ .
ಹಿಂದೆ ಮಾಡಿರುವ ಕೆಲಸಗಳಿಗೂ ಕೂಡ ಕಮಿಷನ್ ಕೇಳುತ್ತಿದ್ದಾರೆ, ಪ್ರತಿಭಟನೆ ಮೂಲಕ ಸರ್ಕಾರವನ್ನು ಎಚ್ಚರಿಸಲು ನಾವು ಸಿದ್ದರಾಗಿದ್ದು, 15-20 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡುತ್ತೇವೆ ಎಂದರು.ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ ಎಂದರು.
ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.
ಅದೇ ರೀತಿ ಯಾವೊಬ್ಬ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ಎಲ್ಲಾ ಶಾಸಕರ ಜೊತೆ ನಾನು ಮಾತನಾಡಿದ್ದೇನೆ ಎಂದರು.
Join The Telegram | Join The WhatsApp |