————————ಕಬ್ಬು ತುಂಬಿದ ಟ್ರ್ಯಾಕ್ಟರಗಳಿಗೆ ಬೆಂಕಿ

ಬಾಗಲಕೋಟೆ: ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಮುಧೋಳ ರೈತರು ಸೈದಾಪುರ ಸಕ್ಕರೆ ಕಾರ್ಖಾನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾಗ, ಕೆಲ ಕಿಡಿಗೇಡಿಗಳು ಕಲ್ಲು ತೋರಾಟ ಮಾಡಿ ವಾಹನವೊಂದರ ಗಾಜು ಒಡೆದಿದ್ದಾರೆ. ಮತ್ತು ಕಬ್ಬು ತುಂಬಿದ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದಾರೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕಬ್ಬು ಬೆಳೆಗಾರರ ವಿವಿಧ ಸಂಘಟನೆಗಳಿಂದ ಪ್ರಸಕ್ತ ಹಂಗಾಮಿಗೆ ಟನ್ ಕಬ್ಬಿಗೆ ₹3,500 ಬೆಲೆ ನಿಗದಿಗೊಳಿಸಬೇಕು ಎಂದು ಒತ್ತಾಯಿಸಿ ಇಂದು ಮುದೋಳ ಸಂಪೂರ್ಣ ಬಂದ ಮಾಡಿ ರಾಜ್ಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು.
ಇದೇ ಸಂಧರ್ಭದಲ್ಲಿ ಕೆಲ ಕಿಡಿಗೇಡಿಗಳು ಸೈದಾಪುರ್ ಸಕ್ಕರೆ ಕಾರ್ಖಾನೆ ಮುಂದೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿ ಕಲ್ಲುತೂರಾಟ ಕಲ್ಲು ತೂರಾಟ ನಡೆಸಿದ್ದಾರೆ ಇದೇ ಸಮಯದಲ್ಲಿ ಬಾಗಲಕೋಟೆ ವರಿಷ್ಠಾಧಿಕಾರಿಗಳಾದ ಸಿದ್ಧಾರ್ಥ್ ಗೋಯಲ್ ಅವರು ಬಿಗಿ ಬಂದೋಬಸ್ತ್ ಮುಖಾಂತರ ಶಾಂತ ಗೊಳಿಸಿದ್ದರು.
ವರದಿ: ಅಜಯ ಕಾಂಬಳೆ




