ಬೈಲಹೊಂಗಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾಂವ್ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ ಕೆಂಗನೂರು ವಲಯದ ಅಮಟೂರು ಕಾರ್ಯಕ್ಷೇತ್ರದಲ್ಲಿ ಭಾರತಾಂಬೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ದುಂಡಪ್ಪ ಕಾಲಗೇರಿ ,ಉದ್ಘಾಟಕರಾದ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ವಿಜಯಕುಮಾರ್, ಮುಖ್ಯ ಅಥಿತಿಗಳಾಗಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯರಾದ ಪಿ ಎಸ್ ಚವ್ಹಾಣ,ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಎಸ್ ಎಫ್ ಹುಬ್ಬಳ್ಳಿ, ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಸಂಗೀತಾ ಸೋಗಿಮನಿ ಹಾಗೂ ಬೀದಿ ನಾಟಕ ಕಲಾ ತಂಡದ ಮುಖ್ಯಸ್ಥರಾದ ಎಸ್. ಎಸ್. ಶರೀಫ್ ದೊಡ್ಡಮನಿ,ಸರ್ವ ಸದಸ್ಯರು, ಶಾಲೆಯ ಮುದ್ದು ಮಕ್ಕಳ ಸಮ್ಮುಖದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮ ಚಾಲನೆ ಮಾಡಿದರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ದೇಶಿಸಿ ತಾಲೂಕಿನ ಯೋಜನಾಧಿಕಾರಿಗಳು ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.ಬೀದಿನಾಟಕದ ಮೂಲಕ ಬಾಲ್ಯ ವಿವಾಹ ತಡೆಗಟ್ಟುವ ಬಗ್ಗೆ, ಶಿಕ್ಷಣದ ಮಹತ್ವ ಬಗ್ಗೆ, ಶೌಚಾಲಯ ಬಳಕೆ ಬಗ್ಗೆ ಭಾರತೀಯ ಸಂಸ್ಕೃತಿ ಬಗ್ಗೆ ಕುಟುಂಬ ಮಹತ್ವ ಬಗ್ಗೆ ಜಾಗೃತೆ ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಸದಸ್ಯರು ಕಾರ್ಯಕ್ರಮವನ್ನು ಉದ್ದೇಶಿಸಿ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು ನಿರೂಪಣೆ ಮಾಡಿದರು,ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಶೈಲಾ ಹಾಗೂ ವಲಯ ಮೇಲ್ವಿಚಾರಕರಾದ ಮಹಾಂತೇಶ್ ಕಾಟಿ ಕಾರ್ಯಕ್ರಮದ ನಿರೂಪಣೆ ಮಾಡಿದರು.ಸೇವಾಪ್ರತಿನಿಧಿ ಐಶ್ವರ್ಯ ಕಾರ್ಯಕ್ರಮ ಸ್ವಾಗತ ಮಾಡಿದರು. ಸಂಘದ ಸದಸ್ಯರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ದುಂಡಪ್ಪ ಹೂಲಿ




