ದಕ್ಷಿಣ ಕನ್ನಡ : ಧರ್ಮಸ್ಥಳದ ಸುತ್ತಮುತ್ತಲು ನಡೆದಿವೆ ಎನ್ನಲಾದ ನೂರಾರು ಕೊಲೆ, ಅಸಹಜ ಸಾವು, ಅತ್ಯಾಚಾರ ಶಂಕೆ ಹಾಗೂ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಎಸ್ಐಟಿ ರಚನೆ ಮಾಡಿದೆ.
ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್ ಅಧಿಕಾರಗಳು ಈ ವಿಶೇಷ ತನಿಖಾ ತಂಡದಲ್ಲಿದ್ದಾರೆ.
ಈ ತಂಡದಲ್ಲಿ ಅನುಚೇತ್, ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ಶುರು ಮಾಡಲಿದೆ.




