Ad imageAd image

ಅಥಣಿ : ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು 

Bharath Vaibhav
ಅಥಣಿ : ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು 
WhatsApp Group Join Now
Telegram Group Join Now

ಬೆಳಗಾವಿ : ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ.

ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು.

ಮೊದಲು ಶಿಕ್ಷಕರು ಗಂಭೀರತೆಯನ್ನು ಅರ್ಥಮಾಡಿಕೊಳ್ಳದಿದ್ದರೂ, ಹೃದಯಾಘಾತದ ಲಕ್ಷಣಗಳು ಕಾಣುತ್ತಿದ್ದಂತೆಯೇ ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಮುಂದಾದರು

ಪೋಷಕರ ಸಹಕಾರದಿಂದ ಕೂಡಲೇ ಅಥಣಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತು. ಆದರೆ ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಲ್ಲಿಯೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.

ಬೇಡರ ಹಟ್ಟಿ ಗ್ರಾಮದ ವಿದ್ಯಾರ್ಥಿನಿ ರೇಣುಕಾ ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!