————————————–ಉಪಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ
ಬೆಳಗಾವಿ: ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಬೆಳಗಿನ ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ.

ಮಕ್ಕಳ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದು, ಅವರ ಪಾಲಕರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಲು ಹಾಗೂ ಅಗತ್ಯ ಚಿಕಿತ್ಸಾ ವ್ಯವಸ್ಥೆಗಳನ್ನು ತಕ್ಷಣ ಕಲ್ಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಗಳು ಶೀಘ್ರ ಚೇತರಿಸಿಕೊಂಡು ತಮ್ಮ ಅಧ್ಯಯನ ಮತ್ತು ಚಟುವಟಿಕೆಗಳಿಗೆ ಮರಳಲೆಂದು ಹಾರೈಸಿದರು
ಜಿಲ್ಲಾ ಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಪೋಷಕರು ಈ ವೇಳೆ ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




