——————————————————ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಸತೀಶ ಜಾರಕಿಹೊಳಿ ಸಾಥ್

ಪಾಟ್ನಾ: (ಬಿಹಾರ) ದೇಶಾದ್ಯಂತ ವ್ಯಾಪಕ ಸುದ್ದಿ ಮಾಡುತ್ತಿರುವ ಬಿಹಾರ ವಿಧಾನ ಸಭೆ ಚುನಾವಣೆ ಕಾವು ಮತ್ತಷ್ಟು ರಂಗೇರಿದ್ದು, ಹಿಂದು ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಪಕ್ಷವು ಇಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಣಕ್ಕೆ ಇಳಿಸಿದೆ.
ರಾಜ್ಯದಿಂದ ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಸಚಿವರು, ಮಾಜಿ ಸಚಿವರು, ಶಾಸಕರ ತಂಡ ಬಿಹಾರ ಚುನಾವಣೆ ಪ್ರಚಾರಕ್ಕೆ ತೆರಳಿ ಅಬ್ಬರದ ಪ್ರಚಾರ ನಡೆಸಿದೆ.
ಕ್ರೀಡಾಪಟುಗಳ ನಗದು ಪುರಸ್ಕಾರ ಹೆಚ್ಚಳ

ಬೆಂಗಳೂರು: ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಪುರಸ್ಕಾರವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.
ಬಡವರ ಜೇಬಿಗೆ ಲಕ್ಷ ಕೋಟಿ: ಡಿಕೆಶಿ

ಬೆಂಗಳೂರು: “ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಹೆಣ್ಣಿಗೆ ಎಂಎಲ್ ಎ ಆಗುವ ಹುಚ್ಚು ಹಿಡಿದರೆ ಬಿಡಿಸಲಾಗದು: ಶಾಸಕ ಮುನಿರತ್ನ

ಬೆಂಗಳೂರು: ಹೆಣ್ಣಿಗೆ ಯಾವ ಹುಚ್ಚು ಹಿಡಿದರೂ ಅದನ್ನು ಬಿಡಿಸಬಹುದು. ಆದರೆ ಎಂಎಲ್ಎ ಆಗುವ ಹುಚ್ಚು ಹಿಡಿದರೆ ಬಿಡಿಸಲಾಗುವುದಿಲ್ಲ ಎಂದು ಶಾಸಕ ಮುನಿರತ್ನ ಪರೋಕ್ಷವಾಗಿ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪಗೆ ಟಾಂಗ್ ನೀಡಿದ್ದಾರೆ.
ರಾಜರಾಜೇಶ್ವರಿ ನಗರದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಕೆ ಶಾಸಕಿ ಆಗಬೇಕು ಎಂದು ಒಂದೇ ಹಠ ಹಿಡಿದಿದ್ದಾರೆ. ಅದಕ್ಕಾಗಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದ್ದಾರೆ ಎಂದರು.
ಭೂ ಕುಸಿತದಿಂದ ದಂಪತಿ ಸಾವು

ರುದ್ರಪ್ರಯಾಗ(ಉತ್ತರಾಖಂಡ): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಭಾರಿ ಭೂಕುಸಿತ ಉಂಟಾಗಿದ್ದು, ಅವಶೇಷಗಳಡಿಯಲ್ಲಿ ಹೂತು ಹೋಗಿ ದಂಪತಿ ಸಾವನ್ನಪ್ಪಿದ್ದಾರೆ. ರುದ್ರಪ್ರಯಾಗ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ವಿಪತ್ತಿನಿಂದಾಗಿ, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಇಬ್ಬರು ಗಾಯಗೊಂಡಿದ್ದಾರೆ. ಸುಮಾರು 20 ಜಾನುವಾರುಗಳು ಸಹ ಅವಶೇಷಗಳ ಅಡಿಯಲ್ಲಿ ಸಿಲುಕಿವೆ.
ರೋಷನ್ ಕೂಡ ಅಪ್ಪು ಅವರ ಅಭಿಮಾನಿ: ಅನುಶ್ರೀ



ಕನಕಪುರ: ನಿನ್ನೆ ತಾನೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಖ್ಯಾತ ನಿರೂಪಕಿ ಅನುಶ್ರೀ ತಮ್ಮ ಮದುವೆ ನಂತರ ಮಾತನಾಡಿ ರೋಷನ್ ಕೂಡ ಅಪ್ಪು ಅವರ ಅಭಿಮಾನಿ ಎಂದು ಹೇಳಿಕೊಂಡಿದ್ದು, ನನ್ನ ರೋಷನ್ ಮದುವೆಗೆ ಅಪ್ಪು ಅವರೇ ಕಾರಣ. ನಮ್ಮಿಬ್ಬರನ್ನು ಪರಿಚಯ ಮಾಡಿಕೊಟ್ಟವರೇ ಅಪ್ಪು ಎಂದು ಅನುಶ್ರೀ ತಿಳಿಸಿದ್ದಾರೆ.
————————————
ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ
ಕಾಗವಾಡ: ಶೇಡಬಾಳ ಪಟ್ಟಣದಲ್ಲಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಅಮೃತ-2.0 ಯೋಜನೆಯಡಿ ರೂ. 4367 ಕೋಟಿ ಅನುದಾನದಲ್ಲಿ ಕಾಗವಾಡ, ಶೇಡಬಾಳ ಮತ್ತು ಉಗಾರ ಖುರ್ದ ಪಟ್ಟಣಗಳಿಗೆ ಸಂಯುಕ್ತ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಗೆ ಸಂಸದೆ ಪ್ರಿಯಾಂಕ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.
ಎ ಡಬ್ಲ್ಯೂ. ಆರ್.ಕೆ. ಉಮೇಶ ಸ್ವಾಗತಿಸಿದರು. ವಿನೋದ್ ಬರಗಾಲಿ ಶೇಡಬಾಳ್ ಪಟ್ಟಣ ಪಂಚಾಯತಿ ಅಧ್ಯಕ್ಷ ಉತ್ಕರ್ಷ್ ಪಾಟೀಲ್ ರಮೇಶ್ ಸಿoದಗಿ ಪಿಎಸ್ಐ ರಾಘವೇಂದ್ರ ಕೋತ ಆರ್ ಕೆ ಉಮೇಶ್ ಸಂಜೆಯ ತಳವಲ ಕರ್ ಕಾಗವಾಡ ಪಟ್ಟಣದ ಮುಖ್ಯಾಧಿಕಾರಿಗಳಾದ ಕೆ.ಕೆ. ಗಾವಡೆ ಸೌರಭ ಪಾಟೀಲ, ಜ್ಯೋತಿ ಕುಮಾರ್ ಪಾಟೀಲ್ ದೀಪಾ ಹೊಂನಕಾಂಬ್ಳೆ ಮಾದೇವಿ ಮಕನ್ವರ್ ಅಣ್ಣಸಾಬ್ಬ ಅರವಾಡೆ ಇದ್ದರು.
ಸರಕಾರದ ‘ಅಮೃತ ಮಿತ್ರ’ ಕಾರ್ಯಕ್ರಮಕ್ಕೆ ಎಮ್ ಸಮೀವುಲ್ಲಾ ಮೆಚ್ಚುಗೆ



ಅರಸೀಕೆರೆ : ಅಮೃತ ಮಿತ್ರ ಕಾರ್ಯಕ್ರಮದ ಅಡಿಯಲ್ಲಿ ಮರಗಳ ರಕ್ಷಣೆಗೆ ಮಹಿಳೆಯರು ಎಂಬ ಕಾರ್ಯಕ್ರಮ ಉತ್ತಮ ಕಾರ್ಯಕ್ರಮ ಆಗಿದ್ದು ಗಿಡಗಳನ್ನು ನೆಟ್ಟು ಪರಿಸರ ರಕ್ಷಿಸುವಲ್ಲಿ ಮಹಿಳೆಯರ ಪಾತ್ರ ಬಹು ಮುಖ್ಯ ಎಂದು ಅರಸಿಕೆರೆ ನಗರಸಭೆಯ ಅಧ್ಯಕ್ಷರಾದ ಎಮ್ ಸಮೀವುಲ್ಲಾ ತಿಳಿಸಿದರು. ಅರಸೀಕೆರೆ ನಗರದ ಜೇನುಕಲ್ ನಗರದ ಬಳಿ ಇರುವ ನಗರ ಸಭೆಯ ನೀರು ಶುದ್ಧೀಕರಣ ಘಟಕದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಗರಸಭೆ ಆಯುಕ್ತರಾದ ಕೃಷ್ಣಮೂರ್ತಿ ಉಪಾಧ್ಯಕ್ಷರಾದ ಮನೋಹರ್ ನಗರಸಭೆ ಸದಸ್ಯರುಗಳಾದ ಪ್ರೇಮ. ಅನ್ನಪೂರ್ಣ. ದರ್ಶನ್ . ನಗರ ಸಭೆಯ ಸಮುದಾಯ ಸಂಘಟನಾಧಿಕಾರಿಗಳಾದ ರಾಜಶೇಖರ್ ಉಪಸ್ಥಿತರಿದ್ದರು.
ವರದಿ: ರಾಜು ಅರಸಿಕೆರೆ
——————————————————————
ಮಹಾ ಗಣಪತಿ: 2 ನೇ ದಿನದ ಶ್ಲೋಕ ವಾಚನ!
ಸಿಂಧನೂರು : ವಿಶ್ವ ಹಿಂದೂ ಪರಿಷತ್ ಭಜರಂಗದಳ ಹಿಂದೂ ಮಹಾ ಗಣಪತಿ 2ನೇ ದಿನದ ಉತ್ಸವ ಸಮಿತಿ ಶ್ಲೋಕ ವಾಚನ ಕಾರ್ಯಕ್ರಮಕ್ಕೆ ಸಿಂಧನೂರಿನ ವಿವಿಧ ಶಾಲೆಗಳ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಾಜಿ ಸಚಿವ ವೆಂಕಟರಾವ್ ನಾಡಗೌಡರು, ವೆಂಕಣ್ಣ ಜೋಶಿ, ರವಿಕುಮಾರ್ ಉಪ್ಪಾರ್, ತಮ್ಮಿನಿಡಿ ಕಿಶೋರ್, ಎಸ್ ಕೆ ಜಗದೀಶ್ ಪಾಲ್ಗೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ಲೋಕ ವಾಚನ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದ ದುದ್ದುಪುಡಿ ಶಾಲೆ ಸಿಂಧನೂರು, ದ್ವಿತೀಯ ಸ್ಥಾನ ಸಹನಾ ಮೌಂಟೇಸರಿ ಶಾಲೆ, ತೃತೀಯ ಸ್ಥಾನ ಸಂಕೇತ್ ಪಿಯೋನಿಕ್ ಶಾಲೆ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.
ವರದಿ: ಬಸವರಾಜ ಬುಕ್ಕನಹಟ್ಟಿ
——-
ಭಾರತದಲ್ಲಿ ಪುಟ್ ಬಾಲ್ ಆಡಲಿದ್ದಾರೆ ಮೆಸ್ಸಿ


ಭಾರತದಲ್ಲಿರುವ ಲಿಯೋನೆಲ್ ಮೆಸ್ಸಿ ಅಭಿಮಾನಿಗಳಿಗೆ ಸಂತಸವಾಗುವ ಸುದ್ದಿ ಬಂದಿದ್ದು, ಮೆಸ್ಸಿ ಕೇರಳಕ್ಕೆ ನವೆಂಬರ್ ನಲ್ಲಿ ಆಗಮಿಸಲಿದ್ದಾರೆ.
ಈ ವರ್ಷದ ನವೆಂಬರ್‌ನಲ್ಲಿ ಅರ್ಜೆಂಟೀನಾ ಫುಟ್‌ಬಾಲ್ ತಂಡವು ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ ಜೊತೆಗೆ ಸೌಹಾರ್ದ ಪಂದ್ಯವನ್ನು ಆಡಲು ಕೇರಳಕ್ಕೆ ಆಗಮಿಸಲಿದೆ ಎಂದು ಕೇರಳ ಕ್ರೀಡಾ ಸಚಿವ ವಿ ಅಬ್ದುರಹಿಮಾನ್ ದೃಢಪಡಿಸಿದ್ದಾರೆ.
ಕಾಮನ್ ವೆಲ್ತ್ ಕ್ರೀಡಾಕೂಟ ಆಯೋಜನೆಗೆ ಕೇಂದ್ರ ಅನುಮೋದನೆ

ನವದೆಹಲಿ: 2030 ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸುವ ಭಾರತದ ಬಿಡ್ ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. “ವಿಶ್ವ ದರ್ಜೆಯ ಕ್ರೀಡಾಂಗಣಗಳು, ಅತ್ಯಾಧುನಿಕ ತರಬೇತಿ ಸೌಲಭ್ಯಗಳು ಮತ್ತು ಉತ್ಸಾಹಭರಿತ ಕ್ರೀಡಾ ಸಂಸ್ಕೃತಿ”ಯಿಂದಾಗಿ ಅಹಮದಾಬಾದ್ ಅನ್ನು ಆತಿಥೇಯ ನಗರವಾಗಿ ಪ್ರಸ್ತಾಪಿಸಲಾಗಿದೆ.
ಕಾಮನ್ ವೆಲ್ಸ್ ಕ್ರೀಡಾಕೂಟ ಆಯೋಜಿಸುವ ಕುರಿತು ಮಾರ್ಚ್ ತಿಂಗಳಲ್ಲಿ ಭಾರತ ಆಸಕ್ತಿ ವ್ಯಕ್ತಪಡಿಸಿತ್ತು. ತದನಂತರ ಈ ಪ್ರಸ್ತಾವನೆಗೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಅನುಮೋದನೆ ನೀಡಿತ್ತು. ಇದಾದ ಕೆಲವೇ ದಿನಗಳಲ್ಲಿ ಇದೀಗ ಕೇಂದ್ರ ಸಚಿವ ಸಂಪುಟವು ಸಮ್ಮತಿ ನೀಡಿದೆ.




