Ad imageAd image

ದರ್ಶನ್ ರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೇಯೇ ಸುಮಲತಾ?

Bharath Vaibhav
ದರ್ಶನ್ ರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೇಯೇ ಸುಮಲತಾ?
WhatsApp Group Join Now
Telegram Group Join Now

ಬೆಂಗಳೂರು: ಸುಮಲತಾ ಅಂಬರೀಷ್ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ದರ್ಶನ್ ಮಗ ಎಂದು ಸುಮಲತಾ ಪರಿಗಣಿಸಿದ್ದರು.

ದರ್ಶನ್ ಜೈಲಿಗೆ ಹೋದಾಗ ಮೌನ ಕಾಯ್ದುಕೊಂಡಿದ್ದ ಸುಮಲತಾ, ದರ್ಶನ್ ಅವರು ಹೊರ ಬರುತ್ತಿದ್ದಂತೆಅವನು ಯಾವಾಗಲೂ ನನ್ನ ಮಗಎಂದಿದ್ದರು. ಈಗ ಡೆವಿಲ್ ಚಿತ್ರೀಕರಣ ಶುರುವಾಗುವ ಹೊತ್ತಿನಲ್ಲೇ ಆಪ್ತರಿಗೆ ಇನ್ಸ್ಟಾದಿಂದ ದರ್ಶನ್ಕೊಕ್ಕೊಟ್ಟಿದ್ದಾರೆ.

ನಟ ದರ್ಶನ್ ಅವರು ಇನ್ಸ್ಟಾಗ್ರಾಮ್ನಲ್ಲಿ ಇಷ್ಟು ದಿನ ಕೆಲವೇ ಕೆಲವರನ್ನು ಫಾಲೋ ಮಾಡುತ್ತಾ ಇದ್ದರು. ಪೈಕಿ ಸುಮಲತಾ, ಅಭಿಷೇಕ್ ಅಂಬರೀಷ್, ಅಭಿ ಪತ್ನಿ ಅವಿವಾ, ಪುತ್ರ ವಿನೀಶ್, ಡಿ ಕಂಪನಿ ಇದ್ದವು. ಆದರೆ, ಈಗ ಅವರು ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ. ಅವರು ಯಾರನ್ನು ಫಾಲೋ ಮಾಡದೇ ಇರೋದು ಹಲವು ಪ್ರಶ್ನೆ ಹುಟ್ಟಿ ಹಾಕಿದೆ . ಫಾಲೋ ಮಾಡುವವರ ಸಂಖ್ಯೆ ʻ0ʼ ಆಗಿದೆ. ಆದ್ರೆ ಇಂಥ ನಿರ್ಧಾರಕ್ಕೆ ಕಾರಣ ಏನು ಅಂತ ದರ್ಶನ್ಫ್ಯಾನ್ಸ್ತಲೆ ಕೆಡಿಸಿಕೊಂಡಿದ್ದಾರೆ.

ದರ್ಶನ್ ಜೈಲಿನಲ್ಲಿ ಇದ್ದಾಗ ಸುಮಲತಾ ಅವರನ್ನು ನೋಡಲು ಹೋಗಿಲ್ಲ. ರಾಜಕೀಯ ಕಾರಣಗಳಿಂದ ಅವರು ಹೀಗೆ ಮಾಡದೆ ಇರಬಹುದು. ಇದು ದರ್ಶನ್ ಮನಸ್ಸಿಗೆ ನಾಟಿದೆಯೇ ಎನ್ನುವ ಪ್ರಶ್ನೆ ಉಂಟುಮಾಡಿದೆ. ಸುಮಲತಾ ತಮ್ಮನ್ನು ಬೆಂಬಲಿಸಿಲ್ಲ ಎಂಬ ಕಾರಣಕ್ಕೆ ಇಬ್ಬರ ಮಧ್ಯೆ ವೈಮನಸ್ಸು ಮೂಡಿತೇ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ದರ್ಶನ್ ಅನ್ಫಾಲೋ ಮಾಡಿದ ವಿಚಾರ ಚರ್ಚೆ ಹುಟ್ಟುಹಾಕಿದ ಬೆನ್ನಲ್ಲೇ ಸುಮಲತಾ ಅವರು ಮಾರ್ಮಿಕವಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಂಗ್ಲಿಷ್ ಲೈನ್ಗಳನ್ನು ಅವರು ಇನ್ಸ್ಟಾಗ್ರಾಮ್ಸ್ಟೇಟಸ್ಗೆ ಪೋಸ್ಟ್ ಮಾಡಿದ್ದಾರೆ. ಅತ್ಯುತ್ತಮ ನಟ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತದೆ ಎಂದರೆ.. ಯಾರು ಸತ್ಯವನ್ನ ತಿರುಚುತ್ತಾರೆ, ಪಶ್ಚಾತಾಪ ಇಲ್ಲದೆ ಬೇರೆಯವರಿಗೆ ನೋವು ಮಾಡುತ್ತಾರೆ, ತಪ್ಪನ್ನು ಬೇರೆಯವರ ಮೇಲೆ ಹಾಕುತ್ತಾರೆ. ಆದಾಗ್ಯೂ ಅವರು ತಮ್ಮನ್ನು ತಾವು ಹೀರೋ ಎಂದುಕೊಳ್ಳುತ್ತಾರೆಎಂದು ಸುಮಲತಾ ಬರೆದುಕೊಂಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!