ಚೆನ್ನೈ: ಇಲ್ಲಿನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ಸಾಯಂಕಾಲ 7:30 ಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಜರ್ಸ್ ಹೈದರಾಬಾದ್ ತಂಡಗಳು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 43 ನೇ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನಗಳಲ್ಲಿವೆ. ಸನ್ ರೈಜರ್ಸ್ ಹೈದರಾಬಾದ್ 9 ನೇ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ನೇ ಹಾಗೂ ಕಡೆಯ ಸ್ಥಾನದಲ್ಲಿದೆ. ಎರಡೂ ತಂಡಗಳು ಸಂಪೂರ್ಣವಾಗಿ ನೆಲಕ್ಕಚ್ಚಿದ್ದು, ಈ ಲೀಗ್ ಪಂದ್ಯದಲ್ಲಿ ಎಂಥ ಪ್ರದರ್ಶನ ನೀಡುತ್ತವೆ ಎಂದು ಕಾಯ್ದು ನೋಡಬೇಕು.