ಒಂಬತ್ತು ತಿಂಗಳು ಬಾಹ್ಯಾಕಾಶದಲ್ಲಿ ಕಳೆದ ನಂತರ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಇಂದು ಬೆಳಗ್ಗೆ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ), “ಸುನೀತಾ ವಿಲಿಯಮ್ಸ್ಗೆ ಸ್ವಾಗತ” ಎಂದು ಎಕ್ಸ್‌ನಲ್ಲಿ ಹರ್ಷ ವ್ಯಕ್ತಪಡಿಸಿದೆ.
“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್)ದಲ್ಲಿ ವಿಸ್ತೃತ ಕಾರ್ಯಾಚರಣೆಯ ನಂತರ ನಿಮ್ಮ ಸುರಕ್ಷಿತ ಮರಳುವಿಕೆ ಗಮನಾರ್ಹ ಸಾಧನೆ” ಎಂದು ಇಸ್ರೋ ಹೇಳಿದೆ. ಇದು ನಾಸಾ, ಸ್ಪೇಸ್‌ಎಕ್ಸ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಬದ್ಧತೆಗೆ ಅದ್ಭುತ ಉದಾಹರಣೆ. ಸುನೀತಾ ತಮ್ಮ ಅಪ್ರತಿಮ ಧೈರ್ಯ ಮತ್ತು ಸಮರ್ಪಣೆಯಿಂದ ಇದನ್ನು ಸಾಧಿಸಿದ್ದಾರೆ” ಎಂದು ಇಸ್ರೋ ಹೇಳಿದೆ.
ಇಸ್ರೋ ಅಧ್ಯಕ್ಷರು ಸಂತೋಷ ವ್ಯಕ್ತಪಡಿಸಿ, “ನನ್ನ ಸಹೋದ್ಯೋಗಿಗಳ ಪರವಾಗಿ ಸುನೀತಾ ವಿಲಿಯಮ್ಸ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಅವರ ಸಾಧನೆಗಳನ್ನು ಗೌರವಿಸುತ್ತೇನೆ” ಎಂದು ತಿಳಿಸಿದ್ದಾರೆ.