ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ತೀರ್ಪು ಪ್ರಟಿಸಿದೆ. 156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕ ಬೆನ್ನಲ್ಲೇ ಆಪ್ ನಾಯಕರು ಶುಭ ಕೋರಿದ್ದಾರೆ. ಆಪ್ ಸಚಿವ ಅತಿಶಿ ಟ್ವೀಟ್ ಮಾಡಿ, ಸತ್ಯಮೇವ ಜಯತೆ. ಸತ್ಯಕ್ಕೆ ತೊಂದರೆಯಾಗಬಹುದು, ಆದರೆ ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.