ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ, ಲೋಕಾಯುಕ್ತಾಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿ ವಿಚಾರಣೆ 4 ವಾರ ಮುಂದೂಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದಂತ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು.