Ad imageAd image

ರಾಜ್ಯ ಸರ್ಕಾರಕ್ಕೆ ಸುಪ್ರೀಂ ಬಿಗ್ ಶಾಕ್ : ರಾಜಮನೆತನಕ್ಕೆ 3400 ಕೋಟಿ ಟಿಡಿಆರ್ ನೀಡಲು ಆದೇಶ 

Bharath Vaibhav
ರಾಜ್ಯ ಸರ್ಕಾರಕ್ಕೆ ಸುಪ್ರೀಂ ಬಿಗ್ ಶಾಕ್ : ರಾಜಮನೆತನಕ್ಕೆ 3400 ಕೋಟಿ ಟಿಡಿಆರ್ ನೀಡಲು ಆದೇಶ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಸುಪ್ರೀಂ ಬಿಗ್ ಶಾಕ್ ಕೊಟ್ಟಿದ್ದು, ಬೆಂಗಳೂರು ಅರಮನೆಗೆ 3400 ಕೋಟಿ ಟಿಡಿಆರ್ ಅನ್ನು ರಾಜಮನೆತನಕ್ಕೆ ನೀಡಲು ಅದೇಶಿಸಿದೆ.

ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ 3,400 ಕೋಟಿಯ ಟಿಡಿಆರ್ ಅನ್ನು ಈ ಕೂಡಲೇ ನೀಡಬೇಕು ಎಂದು ಸುಪ್ರೀಂ ಸೂಚಿಸಿದೆ.

ಮೈಸೂರು ರಾಜವಂಶಸ್ಥರು ಹಾಗೂ ಸರ್ಕಾರದ ನಡುವೆ ನಡೆಯುತ್ತಿರುವ ಕಾನೂನು ಸಮರದಲ್ಲಿ ರಾಜವಂಶಸ್ಥರು ಮೇಲುಗೈ ಸಾಧಿಸಿದ್ದಾರೆ.3,400 ಕೋಟಿಯ ಟಿಡಿಆರ್ ಅನ್ನು ರಾಜ್ಯ ಸರ್ಕಾರ ಠೇವಣಿ ಇಟ್ಟಿತ್ತು. ಅದನ್ನು ರಾಜವಂಶಸ್ಥರಿಗೆ ಹಸ್ತಾಂತರಿಸಬಾರದು ಎಂದು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು

ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್‌ನಲ್ಲಿ ಟಿಡಿಆರ್ ಇಡಲಾಗಿತ್ತು. ಇದನ್ನು ರಾಜಮನೆತನ ಪರ ವಕೀಲರು ವಿರೋಧಿಸಿದ್ದರು. ರಿಜಿಸ್ಟ್ರಾರ್‌ನಲ್ಲಿ ಇರಬೇಕು ಎಂದು ಸರ್ಕಾರ ವಾದಿಸಿತ್ತು. ಈಗ ಅಂತಿಮವಾಗಿ ರಾಜ್ಯ ಮನೆತನಕ್ಕೆ ಟಿಡಿಆರ್ ನೀಡಲು ಸೂಚಿಸಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!