Ad imageAd image

ಮದುವೆಗೆ ಒಪ್ಪಿಕೊಂಡ ಅತ್ಯಾಚಾರ ಆರೋಪಿಗೆ ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ 

Bharath Vaibhav
ಮದುವೆಗೆ ಒಪ್ಪಿಕೊಂಡ ಅತ್ಯಾಚಾರ ಆರೋಪಿಗೆ ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ 
supreme court of india
WhatsApp Group Join Now
Telegram Group Join Now

ನವದೆಹಲಿ: ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ ಅಪರಾಧಿ ಜೈಲು ಶಿಕ್ಷೆಗೆ ಗುರಿಯಾದ ನಂತರ ಸಂತ್ರಸ್ತ ಮಹಿಳೆಯನ್ನು ಮದುವೆಯಾಗಲು ಒಪ್ಪಿಗೆ ನೀಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಸಂತ್ರಸ್ತೆಯನು ಮದುವೆಯಾಗಲು ಒಪ್ಪಿಕೊಂಡ ನಂತರ ಸುಪ್ರೀಂ ಕೋರ್ಟ್ ಆತನ ಶಿಕ್ಷೆಯನ್ನುಅಮಾನತುಗೊಳಿಸಿದೆ.

ಫೇಸ್‌ಬುಕ್ ಮೂಲಕ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿ ಆಕೆಯ ಸ್ನೇಹ ಗಳಿಸಿ, ಬಳಿಕ ಪ್ರೀತಿ ಪ್ರೇಮ ಎಂದುಕೊಂಡು ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದಾನೆ.

ಹೀಗೆ ಕೆಲ ವರ್ಷಗಳು ಕಳೆದಿದ್ದ ಆರೋಪಿ ಮಹಿಳೆ ಮದುವೆ ವಿಚಾರ ಎತ್ತುತ್ತಿದ್ದಂತೆ ನನ್ನ ತಾಯಿ ಈ ಮದುವೆಗೆ ವಿರೋಧಿಸುತ್ತಾರೆ ಎಂದು ಹೇಳಿ ಸಂತ್ರಸ್ತ ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿದ್ದನು.

ಆರೋಪಿ ವರ್ತನೆಯಿಂದ ಬೇಸರಗೊಂಡ ಮಹಿಳೆ ಆತನ ವಿರುದ್ಧ ಅತ್ಯಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್, ಸೆಪ್ಟೆಂಬರ್ 2024ರಲ್ಲಿ ಆತನನ್ನು ಅಪರಾಧಿ ತೀರ್ಪು ನೀಡಿ, 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ವಂಚನೆಗಾಗಿ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಆರೋಪಿ ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ್ದನ್ನು. ಅಲ್ಲಿಯೂ ಹಿನ್ನೆಡೆಯಾಗುತ್ತಿದ್ದಂತೆ ನೇರವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾನೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಅಪರಾಧಿಗೆ ಶಿಕ್ಷೆ ವಿಧಿಸಿದೆ. ಕೂಡಲೇ ಎಚ್ಚೆತ್ತುಕೊಂಡ ವ್ಯಕ್ತಿ ಆಕೆಯನ್ನು ಮದುವೆಯಾಗುವುದಾಗಿ ಹೇಳಿದ್ದು, ನ್ಯಾಯಾಲಯದ ಕೋಣೆಯೊಳಗೆ ಹಾರ ವಿನಿಮಯ ಮಾಡಿಕೊಂಡಿದ್ದಾನೆ.

ಆರೋಪಿ ತಪ್ಪೊಪ್ಪಿಕೊಂಡು ಮದುವೆಯಾಗಲು ಒಪ್ಪಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಯನ್ನು ರದ್ದುಗೊಳಿಸಿದೆ. ಅಲ್ಲದೇ ಮುಂದಿನ ವಿಚಾರಣೆಯನ್ನು ಜುಲೈ 25ಕ್ಕೆ ನಿಗದಿಪಡಿಸಿದೆ.

WhatsApp Group Join Now
Telegram Group Join Now
Share This Article
error: Content is protected !!