Ad imageAd image

ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ / ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ: ಸುರೇಶ್

Bharath Vaibhav
ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ / ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ: ಸುರೇಶ್
WhatsApp Group Join Now
Telegram Group Join Now

ತುರುವೇಕೆರೆ: ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯವಾದುದು. ಕ್ರೀಡಾಪಟುಗಳು ಕ್ರೀಡಾಮನೋಭಾವದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕೆಂದು ಎಸ್.ಬಿ.ಐ. ವ್ಯವಸ್ಥಾಪಕ ಸುರೇಶ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2024-25 ನೇ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಆಟಗಾರರು ಕ್ರೀಡಾಸ್ಪೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಬೇಕು. ಆಟದಲ್ಲಿ ಸೋತರೆ ಧೈರ್ಯಗೆಡಬಾರದು, ಸೋಲೇ ಗೆಲುವಿನ ಸೋಪಾನ ಎಂದು ಭಾವಿಸಿ ಮುಂದಿನ ಗೆಲುವಿಗೆ ಸನ್ನದ್ದರಾಗಬೇಕು. ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತರಿಗೆ ಕೊರತೆಯಿಲ್ಲ. ವಿದ್ಯಾರ್ಥಿಗಳು ತಮ್ಮಲ್ಲಿರುವ ಕ್ರೀಡಾಪ್ರತಿಭೆಯನ್ನು ಹೊರಹಾಕಲಿಕ್ಕೆ ಇದೊಂದು ಉತ್ತಮ ಅವಕಾಶವಾಗಿದ್ದು, ಉತ್ತಮವಾಗಿ ಆಡಿ, ಗೆಲುವಿನೊಂದಿಗೆ ಎಲ್ಲರ ಮನಸ್ಸನ್ನೂ ಗೆಲ್ಲಿ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎಲ್.ಅನಂತರಾಮು ಮಾತನಾಡಿ, ಆಟಗಾರರು ಕ್ರೀಡೆಯಲ್ಲಿ ಜಯಗಳಿಸಿದರೆ ಖುಷಿಪಡಿ, ಗರ್ವಪಡಬೇಡಿ. ಸೋತರೆ ಕುಗ್ಗದೆ ಮತ್ತೊಮ್ಮೆ ಗೆಲ್ಲಲು ಪ್ರಯತ್ನ ಮಾಡಿ. ಗೆಲುವಿನ ಅವಕಾಶ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಕ್ರೀಡಾಪಟಗಳು ಯಾವುದೇ ಗೊಂದಲ, ಗದ್ದಲಕ್ಕೆ ಆಸ್ಪದ ನೀಡದಂತೆ ಆಟವಾಡಬೇಕು. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು.

ಯುವ ಮುಖಂಡ ಮಂಜಪ್ಪ ಕ್ರೀಡಾಜ್ಯೋತಿ ಸ್ವೀಕರಿಸಿದರು. ತಾಲ್ಲೂಕಿನ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಾದ ನಟರಾಜ್, ಕಾಂತರಾಜು, ಮಲ್ಲಿಕಾರ್ಜುನ್, ಪ್ರಕಾಶ್, ಗಣೇಶ್ ಕುಮಾರ್, ಮಹಮದ್ ರಯಾನ್, ಸುರೇಶ್, ರಾಜು, ಮುನಿರಾಜು, ಮಮತ, ಮಧುಶ್ರೀ, ಉಪಪ್ರಾಂಶುಪಾಲ ವೆಂಕಟೇಶ್, ಉಪನ್ಯಾಸಕರಾದ ನಂಜೇಗೌಡ, ನಿಜಗುಣಸ್ವಾಮಿ, ಹರೀಶ್, ಶಹನಾಜ್ ಬಾನು, ಕೋಮಲ ಸೇರಿದಂತೆ ದೈಹಿಕ ಶಿಕ್ಷಕರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!