Ad imageAd image

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಭಯೋತ್ಪಾದಕ ಸಾವು  

Bharath Vaibhav
ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಭಯೋತ್ಪಾದಕ ಸಾವು  
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯಾಗಿದ್ದ ಶಂಕಿತ ಭಯೋತ್ಪಾದಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಶಂಕಿತ ಭಯೋತ್ಪಾದಕ ಸಾಧಿಕ್ ಪಾಷಾ (47) ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಆತ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ.

ಸದ್ದುಗುಂಟೆ ಪಾಳ್ಯದಲ್ಲಿ ನಡೆದ ಸ್ಪೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಈತನನನ್ನು ಪೊಲೀಸರು ಬಂಧಿಸಿದ್ದರು. 2020 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಈತನನ್ನು ಇರಿಸಲಾಗಿತ್ತು.

ಸದ್ದುಗುಂಟೆ ಪಾಳ್ಯದಲ್ಲಿ ನಡೆದ ಸ್ಪೋಟಕ ವಸ್ತು ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ 6 ಆರೋಪಿಗಳನ್ನು ಬಂಧಿಸಿತ್ತು. ಘಟನೆಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!