Ad imageAd image

ಕಾನೂನು ಸೇವಾ ಸಮಿತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ.

Bharath Vaibhav
ಕಾನೂನು ಸೇವಾ ಸಮಿತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ.
WhatsApp Group Join Now
Telegram Group Join Now

ಸಿರುಗುಪ್ಪ :– ನಗರದ ಜೆ.ಎಮ್.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ, ನಗರಸಭೆ ಕಾರ್ಯಾಲಯ ಇವರ ಸಹಯೋಗದಲ್ಲಿ ನಡೆದ ಸ್ವಚ್ಛತಾ ಹೀ ಸೇವಾ ಅಭಿಯಾನ ಕಾರ್ಯಕ್ರಮಕ್ಕೆ ವಕೀಲರ ಸಂಘದ ತಾಲೂಕಾಧ್ಯಕ್ಷ ಉಪ್ಪಾರ ವೆಂಕೋಬ ಅವರು ಚಾಲನೆ ನೀಡಿದರು.

ನಂತರ ಮಾತನಾಡಿ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅದರಂತೆ ನಾವು ವಾಸಿಸುವ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆಯನ್ನು ಕಾಪಾಡಿಕೊಂಡು ಮಹಾತ್ಮ ಗಾಂಧೀಜಿಯವರ ಕನಸನ್ನು ನನಸಾಗಿಸಬೇಕಿದೆಂದರು.ಪ್ಯಾನಲ್ ವಕೀಲರಾದ  ಎನ್.ಅಬ್ದುಲ್‌ಸಾಬ್ ಮಾತನಾಡಿ ಮಳೆಗಾಲದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ರೋಗಾಣುಗಳು ಹೆಚ್ಚಿದಾಗ ಅನಾರೋಗ್ಯವುಂಟಾಗುತ್ತದೆ.

ಆದ್ದರಿಂದ ಎಲ್ಲರೂ ಸ್ವಇಚ್ಚೆಯಿಂದ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಸಿಕೊಂಡು ರೋಗಗಳನ್ನು ತಡೆಗಟ್ಟೋಣವೆಂದರು.
ಪೌರಕಾರ್ಮಿಕರೊಂದಿಗೆ ಇನ್ನಿತರ ವಕೀಲರು, ನ್ಯಾಯಾಲಯ ಸಿಬ್ಬಂದಿಗಳು, ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡು ಆವರಣವನ್ನು ಸ್ವಚ್ಛಗೊಳಿಸಿದರು.ಇದೇ ವೇಳೆ ಪ್ಯಾನಲ್ ವಕೀಲರಾದ ಮಲ್ಲಿಗೌಡ, ವಕೀಲರಾದ ಹೇಮಲತಾ, ಸ್ವರೋಜ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ರಂಗಸ್ವಾಮಿ, ಸ್ವರ್ಣಲತಾ ಇನ್ನಿತರರಿದ್ದರು.

ವರದಿ : ಶ್ರೀನಿವಾಸ ನಾಯ್ಕ

WhatsApp Group Join Now
Telegram Group Join Now
Share This Article
error: Content is protected !!