ಶಿವಾಪೂರ : ಇಲ್ಲಿನ ಅಡವಿಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಬಂಧದ ಆರೋಪದ ಹಿನ್ನಲೆ ಇಡೀ ಗ್ರಾಮಸ್ಥರು ಮಠದಿಂದ ಸ್ವಾಮೀಜಿಯನ್ನು ಹೊರಹಾಕಬೇಕೆಂಬ ಒತ್ತಡದ ಹಿನ್ನೆಲೆ ಅಡವಿಸಿದ್ದರಾಮ ಸ್ವಾಮಿಯನ್ನು ಗ್ರಾಮದ ಹಿರಿಯರು ಮಠದಿಂದ ಉಚ್ಛಾಟಿಸಿರುವ ಘಟನೆ ನಡೆದಿದೆ.
ನಿನ್ನೆ (ಜೂ 21) ವಿಜಯಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದ್ದರು. ಆ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಯನ್ನ ಹಾಗೂ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನು ಗ್ರಾಮದ ಪ್ರಮುಖರು ರಾತ್ರಿ ಸಮಯದಲ್ಲಿ ಮಠದಲ್ಲಿ ಯಾರು ಇಲ್ಲದ ವೇಳೆ ಆ ಮಹಿಳೆ ತಮ್ಮ ಕೊಠಡಿಯೊಳಗೆ ಇರುವುದು ಯಾಕೆ ಎಂದು ಸ್ವಾಮೀಜಿಯನ್ನ ಪ್ರಶ್ನಿಸಿದ್ದಾರೆ.
ಇದಕ್ಕೆ ಸ್ವಾಮೀಜಿ ಸಮಯವಾಗಿದ್ದರಿಂದ ಇಲ್ಲೇ ಉಳಿದುಕೊಂಡಿದ್ದಾರೆ ಎಂದು ಹೇಳಿದ್ದು, ನಾನು ಯಾವುದೇ ತಪ್ಪನು ಮಾಡಿಲ್ಲ ಎಂದು ವಾದಿಸಿದ್ದಾರೆ. ಅದಕ್ಕೆ ಗ್ರಾಮಸ್ಥರು ಒಪ್ಪಿಲ್ಲ.ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ತಡರಾತ್ರಿ ಆ ಮಹಿಳೆ ಮತ್ತು ಅವಳ ಮಗಳನ್ನು ಸಾಂತ್ವಾನ ಕೇಂದ್ರಕ್ಕೆ ಬಿಟ್ಟಿದ್ದಾರೆ.
ಇಂದು ಇಡೀ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಸ್ವಾಮೀಜಿಯನ್ನು ಮಠದಿಂದ ಹೊರಹಾಕಲಾಗಿದೆ.




