ಸಾವಳಗಿ : ಪ್ರಾಥಮಿಕ ಆರೋಗ್ಯ ಕೇಂದ್ರ ಸಾವಳಗಿ ಇಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಸುಜಾತ ಅಭಯಕುಮಾರ್ ನಾಂದೇಕರ್ ಇವರ ಸೇವಾ ನಿವೃತ್ತಿ ಕಾರ್ಯಕ್ರಮವನ್ನು ತಾಲೂಕು ಆರೋಗ್ಯ ಅಧಿಕಾರಿಯದ ಡಾ. ಗಲಗಲಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು
ಪ್ರಾಥಮಿಕ ಆರೋಗ್ಯ ಕೇಂದ್ರ ಸಾವಳಗಿ ಎಲ್ಲಿ ಮಹಿಳಾ ಆರೋಗ್ಯ ಸುರಕ್ಷಣಾ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಸುಜಾತಾ ನಾಂದ್ರೆಕರ ಇವರ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಸೇವೆಗೆ ಸೇರಿದ್ದ ಸುಜಾತಾ ಅವರು ಅರೋಗ್ಯ ಇಲಾಖೆಯಲ್ಲಿ 35 ವರ್ಷ 6 ತಿಂಗಳು ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇವರ ಸೇವೆಗೆ ಎಲ್ಲ ಸಿಬ್ಬಂದಿ ವರ್ಗದವರು ಹಾಡಿ ಹೊಗಳಿದ್ದರು
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಭರತೇಶ್ ಜಮಖಂಡಿ ಡಾ. ಬಿರಾದಾರ ಪರ್ಮಾನಂದ ಅಂಬಿ ಅಭಯಕುಮಾರ್ ನಾಂದ್ರೆಕರ್ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ವರದಿ :ಅಜಯ ಕಾಂಬಳೆ