ಬೆಳಗಾವಿ : ರಾಜ್ಯವೇ ಬೆಚ್ಚಿ ಬೀಳುವ ಮತ್ತೊಂದು ಪೈಶಾಚಿಕ ಕೃತ್ಯ ಬೆಳಗಾವಿಯಲ್ಲಿ ನಡೆದಿದ್ದು, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯನ್ನು ನಯವಾಗಿ ಮಾತನಾಡಿಸಿ ಯುವಕರ ಗ್ಯಾಂಗ್ ನಗರ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಮೂವರು ಬಾಲಕರು ಮೊದಲಿಗೆ ಪಾರ್ಟಿ ಮಾಡಿದ್ದು, ಆ ಬಳಿಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಈ ಘಟನೆ ಮೇ 6ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಇನ್ನು ವಿಷಯ ತಿಳಿಯುತ್ತಿದ್ದಂತೆ ನಿನ್ನೆ (ಮೇ 12) ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೂಡಲೇ ತನಿಖೆ ಮಾಡಿದ ಪೊಲೀಸರು ಈಗಾಗಲೇ ಇಬ್ಬರು ಬಾಲಕರನ್ನು ಅರೆಸ್ಟ್ ಮಾಡಿ ಬಾಲ ಮಂದಿರಕ್ಕೆ ಸೇರಿಸಿದ್ದಾರೆ ಎನ್ನಲಾಗಿದೆ.
ಒಟ್ಟು ಮೂವರು ಬಾಲಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಸದ್ಯ ಇನ್ನೋರ್ವ ಬಾಲಕನಿಗಾಗಿ ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ.




