ಹಾವೇರಿ: ಖಾತೆ ಬದಲಾವಣೆಗೆ 8,500 ರೂಪಾಯಿ ಪಡೆಯುತ್ತಿದ್ದಾಗಲೇ ವಿಲ್ಕೇಜ್ ಅಕೌಂಟೆಂಟ್ ಓರ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ತಾಅಲೂಕಿನ ನೆಗಳೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಫಕಿರೇಶ್ ಬಾರ್ಕಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬಸಾಪುರ ಗ್ರಾಮದ ರೈತ ಕರಿಯಪ್ಪ ಕೆಸರಳ್ಳಿ ಎಂಬುವವರ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ಫಕಿರೇಶ್, 63,000 ರೂಪಾಯಿಗೆ ಬೇಡಿಕೆ ಇಟ್ಟಿದ್ದರು. 30 ಸಾವಿರ ರೂಪಾಯಿ ಹಣವನ್ನು ಮೊದಲೇ ಪಡೆದುಕೊಂಡಿದ್ದರು. ಇಂದು 8,500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವೇಳೆ ಫಕಿರೇಶ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಅಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.




