ಸೇಡಂ:- ತಾಲೂಕಿನ ಶಿಲಾರಕೂಟ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಸತತ ಮೂರು ವರ್ಷ ಖೋಖೋ ಸ್ಪರ್ಧೆಯಲ್ಲಿ ತಾಲೂಕ ಮಟ್ಟದ ಹ್ಯಾಟ್ರಿಕ್ ವಿಜಯ ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದು ಸಂತಸ ತಂದಿದೆ.
ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ನಡೆದ ತಾಲೂಕ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮ ಮುಧೋಳ ಬಾಲಕರ ಶಾಲೆಯ ವಿದ್ಯಾರ್ಥಿಗಳ ಜೊತೆ ಸ್ಪರ್ಧಿಸಿ ವಿಜೇತರಾಗಿದ್ದಾರೆ.
ಇದೇ ವೇಳೆ ಶಾಲೆಯ ಸಂಜೀವ ತಂದೆ ಮೊಗುಲಪ್ಪ ೧೦೦ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಶಾಲೆಯ ಮುಖ್ಯ ಗುರುಗಳಾದ ಅಶೋಕ್ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರಾದ ಬಸವರಾಜ್ ಸಾಗರ್, ಸಮೂಹ ಸಂಪನ್ಮೂಲ ವ್ಯಕ್ತಿ ಸಾಯಿಬಣ್ಣ ಪೂಜಾರಿ, ಎಸ್ಡಿಎಂಸಿ ಅಧ್ಯಕ್ಷರಾದ ರಾಮಕೃಷ್ಣ, ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಭೀಮರೆಡ್ಡಿ ಅಕುದೋಟ ಹಾಗೂ ಶಾಲಾ ಶಿಕ್ಷಕರು ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಈ ವರ್ಷ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ ಬರುತ್ತಾರೆ ಎಂಬ ನಿರೀಕ್ಷೆ ಇದೆ ಎಂದು ತಿಳಿಸಿದರು.
ವರದಿ:- ವೆಂಕಟಪ್ಪ ಕೆ ಸುಗ್ಗಾಲ್.