ಬೈಲಹೊಂಗಲ: -ಬೆಳವಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಸೊಗಲದ ಹಿಂದಿ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕನ್ನಡ ಭಾಷಣದಲ್ಲಿ ಪೃಥ್ವಿ ಗರಗದ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಮುಖ್ಯಶಿಕ್ಷರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ದುಂಡಪ್ಪ ಹೂಲಿ