ಕೊಪ್ಪಳ : ಟಾಟಾ ಏಸ್ ಪಲ್ಟಿಯಾಗಿ 28 ನರೇಗಾ ಕಾರ್ಮಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಬರಗೂರು ಕಮಾನ್ ಬಳಿ ಈ ಅಪಘಾತ ಸಂಭವಿಸಿದೆ.. ವೇಗವಾಗಿ ಬರುತ್ತಿದ್ದ ಟಾಟಾ ಏಸ್ ಏಕಾಏಕಿ ಪಲ್ಟಿಯಾಗಿದೆ.
ಪರಿಣಾಮ 28 ನರೇಗಾ ಕಾರ್ಮಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.