ಬಾಗಲಕೋಟೆ : ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕರೊಬ್ಬರು ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.
ಜಮಖಂಡಿ ತಾಲೂಕಿನ ತುಂಗಳ ಹೈಸ್ಕೂಲ್ ವೊಂದರಲ್ಲಿ ಎಂದಿನಂತೆ ಪಾಠ ಮಾಡುತ್ತಿದ್ದ ವೇಳೆ ಕನ್ನಡ ಶಿಕ್ಷಕ ಗುರುಪಾದ ಹಿಪ್ಪರಗಿ (49) ಏಕಾಏಕಿ ಕುಸಿದು ಬಿದ್ದಿದ್ದಾರೆ.ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುಪಾದ ಅವರು ಕುಸಿದು ಬೀಳುತ್ತಿದ್ದಂತೆ ಸಹಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಪರಿಶೀಲಿಸಿದ ವೈದ್ಯರು ಶಿಕ್ಷಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.




