Ad imageAd image

ಪರಟಿ ನಾಗಪ್ಪಾ ಹ್ವಾಲಿನಲ್ಲಿ ಶಿಕ್ಷಕರ ದಿನದ ಆಚರಿಸಲಾಯಿತು.

Bharath Vaibhav
ಪರಟಿ ನಾಗಪ್ಪಾ ಹ್ವಾಲಿನಲ್ಲಿ ಶಿಕ್ಷಕರ ದಿನದ  ಆಚರಿಸಲಾಯಿತು.
WhatsApp Group Join Now
Telegram Group Join Now

ಚಿಕ್ಕೋಡಿ  : ಈ ಸಂದರ್ಭದಲ್ಲಿ ಮಾತನಾಡಿದ ದೆಹಲಿ ಪ್ರತಿನಿಧಿಯಾದ ಶ್ರೀ ಪ್ರಕಾಶ್ ಹುಕ್ಕೇರಿಯವರು ಗ್ರಾಮೀಣ ಪ್ರದೇಶದಲ್ಲಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ತಾಲ್ಲೂಕಿನ ವಾಳಕಿ, ಖಡಕಲಾಟ, ಜನವಾಡ, ಹಿರೇಕೋಡಿ ಹಾಗೂ ಕಮತೇನಹಟ್ಟಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಲಾಗಿದ್ದು, ಪ್ರತಿ ಶಾಲೆಯಲ್ಲಿ 2 ಕೊಠಡಿ ನಿರ್ಮಾಣಕ್ಕೆ ತಲಾ 25 ಲಕ್ಷ ಅನುದಾನ ಮಂಜೂರಾಗಿದೆ” ಎಂದು ಹೇಳಿದರು.

ಪಟ್ಟಣದ ಪರಟಿ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಚಿಕ್ಕೋಡಿ ಡಿ.ಡಿ.ಪಿ.ಐ. ಕಚೇರಿ ಸಹಯೋಗದಲ್ಲಿ ಹಮ್ಮಿಕೊಂಡ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಕ್ಷೇತ್ರ ವ್ಯಾಪ್ತಿಯ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುತ್ತಿದ್ದು, ಶಿಕ್ಷಕರು ಇವುಗಳನ್ನು ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸುಧಾರಣೆ ತರಬೇಕೆಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಯ ಜಿಲ್ಲಾಧ್ಯಕ್ಷ ಸಿದ್ರಾಮ ಲೋಕನ್ನವರ ಮಾತನಾಡಿ, ಶಿಕ್ಷಕರ ಜೀವನ ಮಕ್ಕಳ ಏಳ್ಗೆಗೆ ಮುಡುಪಾಗಿರಬೇಕು. ಭಾರತದ ಭವಿಷ್ಯ ರೂಪಿಸಿಲು ಸರ್ಕಾರಿ ಶಾಲೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಇಂದಿನ ಅವಶ್ಯಕತೆಯಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, “2026ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಟಾಪ್ 10 ಜಿಲ್ಲೆಗಳಲ್ಲಿ ಒಂದಾಗಿರಬೇಕು. ಶಿಕ್ಷಕರು ಹಾಗೂ ಇಲಾಖೆ ಈ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯಿಂದ 9 ಜನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಾಗೂ 8 ಜನ ಪ್ರೌಢ ಶಾಲಾ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇತ್ತೀಚೆಗೆ ನಿವೃತ್ತರಾದ ಶಿಕ್ಷಕರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಇಲಾಖೆಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಪಟ್ಟಣದ ಚರಮೂರ್ತಿಮಠದ ಸಂಪಾದನಾ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಡಿ.ಡಿ.ಪಿ.ಐ. ಆರ್ ಎಸ್ ಸೀತಾರಾಮು, ಡಿ.ಡಿ.ಪಿ.ಯು. ಪಾಂಡುರಂಗ ಭಂಡಾರಿ, ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ತಹಶೀಲ್ದಾರ ರಾಜೇಶ ಬುರ್ಲಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎನ್ ಜಿ ಪಾಟೀಲ, ಬಿ.ಇ.ಓ.ಪ್ರಭಾವತಿ ಪಾಟೀಲ, ಜಿನೇಂದ್ರ ನಿಲಜಗಿ, ಪುರಸಭೆ ಸದಸ್ಯ ರಾಮಾ ಮಾನೆ, ರವಿ ಹಂಪಣ್ಣವರ ಇತರ ಮುಖಂಡರು ಸಾವಿರಾರು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!