ಚಿತ್ರದುರ್ಗ: ಸರ್ಕಾರಿ ಶಾಲೆಯ ಆವರಣದಲ್ಲೇ ವಾಮಾಚಾರ ಮಾಡಿರೋ ಘಟನೆ ಚಿತ್ರದುರ್ಗದ ಚಳ್ಳಕೆರೆಯ ತಿಮ್ಮಪ್ಪನಹಳ್ಳಿಯಲ್ಲಿ ನಡೆದಿದೆ.ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯ ಸರ್ಕಾರಿ ಶಾಲೆ ಆವರಣದಲ್ಲಿ ವಾಮಾಚಾರ ಮಾಡಲಾಗಿದೆ.
ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕರ ಕೊಠಡಿ ಬಳಿ ತಲೆ ಬುರುಡೆ, ಲಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಪತ್ತೆಯಾಗಿದೆ.ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು, ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.
ಈ ವಿಷಯ ತಿಮ್ಮಪ್ಪನಹಳ್ಳಿ ಶಾಲೆಗೆ ತಳಕು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಮಾಚಾರಕ್ಕೆ ಬಳಸಿದ ಬುರುಡೆ ಇತರೆ ವಸ್ತುಗಳ ತೆರವು ಮಾಡಲಾಗಿದೆ.