ಬೆಂಗಳೂರು: ಬೆಂಗಳೂರಿನಲ್ಲಿ ಕಿರುತರೆ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕನ್ನಡ, ತಮಿಳು ಸೇರಿ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ನಂದಿನಿ ಬೆಂಗಳೂರಿನ ಆರ್.ಆರ್. ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೂಲತ: ಕೊಟ್ಟೂರಿನವರಾದ ನಂದಿನಿ ಬೆಂಗಳೂರಿನಲ್ಲಿ ನೆಲೆಸಿದ್ದರು.
ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ, ಮದುಮಗಳು, ಸೇರಿ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು.ತಮಿಳು ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದರು.
ಗೌರಿ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಅವರು ಕುಡಿಯುವ ಸನ್ನಿವೇಶವಿತ್ತು. ಇದೀಗ ಅವರು ನಿಜ ಜೀವನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.




