Join The Telegram | Join The WhatsApp |
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಬಳಿ ಚುಂಚನೂರು ಗ್ರಾಮದ ಬಳಿ ಮಹೀಂದ್ರ ಗೂಡ್ಸ್ ವಾಹನ ಮರಕ್ಕೆ ಡಿಕ್ಕಿಯಾಗಿ, ಆರು ಜನ ದುರ್ಮರಣಕ್ಕೀಡಾಗಿದ್ದಾರೆ. 16 ಮಂದಿಗೆ ಗಾಯಗೊಂಡಿರುವ ಘಟನೆ ನಡೆದಿದೆ.
ಚುಂಚನೂರು ಗ್ರಾಮದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸವದತ್ತಿ ಯಲ್ಲಮ್ಮದೇವಿ ಜಾತ್ರೆಗೆ ತೆರಳುತ್ತಿದ್ದ ವೇಳೆ ದುರಂತ ನಡೆದಿದೆ.
ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವಿಗೀಡಾಗಿದ್ದಾರೆ. ಮೃತರೆಲ್ಲರೂ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದವರು.
ಹಣಮವ್ವ ಮ್ಯಾಗಾಡಿ (25), ದೀಪಾ ಹರಿಜನ (31), ಸವಿತಾ ಮುಂಡಾಸ (17) ಸುಪ್ರಿತಾ ಹರಿಜನ (11) ಯಲ್ಲಪ್ಪ ಬನ್ನೂರ (42) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇಂದ್ರವ್ವ ಸಿದ್ದಮೇತ್ರಿ (24) ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟರು. ಬೆಳಗಾವಿ ಜಿಲ್ಲೆಯ ಕಟಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿ ಸಿದೆ
Join The Telegram | Join The WhatsApp |