ಚಾಮರಾಜನಗರ : ಕರ್ನಾಟಕ ತಮಿಳುನಾಡು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ 76 ನೇ ಗಣ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಯಿತು…
ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 76 ನೇ ಗಣ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.
ಬಳಿಕ ತೆರೆದ ವಾಹನದಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ವಿವಿಧ ಶಾಲಾ ಮಕ್ಕಳು ಮತ್ತು ಪೊಲೀಸ್ ಸಿಬ್ಬಂದಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಜಿಲ್ಲಾ ಜನತೆಯನ್ನು ಉದ್ದೇಶಿಸಿ ಸರ್ಕಾರದ ಆಶಯಗಳನ್ನು ತಿಳಿಸಿದರು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮ ಜರುಗಿತು. ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಸದ ಸುನೀಲ್ ಭೋಸ್, ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಶಿಲ್ಪನಾಗ್ ಸೇರಿದಂತೆ ವಿವಿಧ ಸರ್ಕಾರಿ ಅಧಿಕಾರಿಗಳು ಚುನಾಯಿತ ಜನ ಪ್ರತಿನಿಧಿಗಳು ಭಾಗವಹಿಸಿದ್ದರು.
ಜಿಲ್ಲೆಯ ಯಳಂದೂರು ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಬ್ಬದ ವಾತಾವರಣದಲ್ಲಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ಶ್ರೀಧರ್, ಡಾ. ನಾಗೇಂದ್ರಮೂರ್ತಿ, ಡಾ. ನಾಗೇಶ್, ಡಾ. ಪ್ರವೀಣ್, ಲ್ಯಾಬ್ ಮೋಹನ್ ಕುಲ್ಕುಣಿ, ಸುನಂದಾ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು….
ವರದಿ :ಸ್ವಾಮಿ ಬಳೇಪೇಟೆ




