Ad imageAd image

RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು : ಪ್ರಿಯಾಂಕ್ ಖರ್ಗೆ

Bharath Vaibhav
RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು : ಪ್ರಿಯಾಂಕ್ ಖರ್ಗೆ
PRIYANKA KHARGE
WhatsApp Group Join Now
Telegram Group Join Now

ಬೆಂಗಳೂರು : ಆರ್ ಎಸ್ ಎಸ್ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇದೀಗ ಮತ್ತೆ ಆರ್ ಎಸ್ ಎಸ್ ಕುರಿತು ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದು, ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ “RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು” ಎಂಬ ಪ್ರತಿಜ್ಞೆ ಕೈಗೊಳ್ಳಬೇಕು.

ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಜಿವಾದ, ಮನುವಾದಗಳನ್ನೇ ನರ ನಾಡಿ, ರಕ್ತಗಳಲ್ಲಿ ಪ್ರವಾಹಿಸಿಕೊಂಡಿರುವ RSS ಎಂಬ ವಿಷಕಾರಿ ಸಂಘಟನೆಯನ್ನು ಕಾಂಗ್ರೆಸ್ ಪಕ್ಷವು ಎಂದಿಗೂ ಶತ್ರುವಾಗಿಯೇ ನೋಡುತ್ತದೆ.

ಏಕೆಂದರೆ, ಆರ್‌ಎಸ್‌ಎಸ್ ಸಂವಿಧಾನಕ್ಕೆ ಶತ್ರು, ಆರ್‌ಎಸ್‌ಎಸ್ ಐಕ್ಯತೆಗೆ ಶತ್ರು, ಆರ್‌ಎಸ್‌ಎಸ್ ರಾಷ್ಟ್ರಧ್ವಜಕ್ಕೆ ಶತ್ರು, ಆರ್‌ಎಸ್‌ಎಸ್ ರಾಷ್ಟ್ರಗೀತೆಗೆ ಶತ್ರು, ಆರ್‌ಎಸ್‌ಎಸ್ ಏಕತೆಗೆ, ಸಾರ್ವಭೌಮತೆಗೆ ಶತ್ರು.ಬಾಬಾ ಸಾಹೇಬರು, ಸರ್ದಾರ್ ಪಟೇಲರು ದಶಕಗಳ ಹಿಂದೆಯೇ ಆರ್‌ಎಸ್‌ಎಸ್ ಕುರಿತು ನಿಷ್ಠುರವಾಗಿ ಎಚ್ಚರಿಕೆಯ ಸಂದೇಶ ನೀಡಿ ಹೋಗಿದ್ದಾರೆ, ಆ ಮಹನೀಯರ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಮನುವಾದಿಗಳನ್ನು ದೂರ ಇಡಬೇಕಿದೆ.

ಬ್ರಿಟಿಷರೊಂದಿಗೆ ಕೈಜೋಡಿಸಿ ಭಾರತ ವಿರೋಧಿಯಾಗಿ ನಡೆದುಕೊಂಡಿದ್ದ ಆರ್‌ಎಸ್‌ಎಸ್ ಸ್ವತಂತ್ರಾನಂತರ ಐಕ್ಯತೆಯ ವಿರೋಧಿ ಚಟುವಟಿಕೆಗಳನ್ನು ಇನ್ನಷ್ಟು ಹೆಚ್ಚಿಸಿತು. ಸಂಘ ಪರಿವಾರದ ಅಪಾಯವನ್ನು ಅಂದೇ ಊಹಿಸಿದ ಸರ್ದಾರ್ ಪಟೇಲರು ನಿಷೇಧ ಹೇರಿದ್ದರು.

“ನಮ್ಮ ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರದ ಶಕ್ತಿಗಳನ್ನು ಬೇರುಸಹಿತ ನಿರ್ಮೂಲನೆ ಮಾಡಬೇಕಿದೆ, ಮತ್ತು ರಾಷ್ಟ್ರದ ಸ್ವಾತಂತ್ರ್ಯವನ್ನು ಅಪಾಯಕ್ಕೆ ಸಿಲುಕಿಸಲು ಮತ್ತು ದೇಶದ ಹೆಸರನ್ನು ಕಳೆಗುಂದಿಸಲು ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್ ಅನ್ನು ನಿಷೇಧಿಸುತ್ತಿದ್ದೇವೆ” ಇದು ಸರ್ದಾರ್ ಪಟೇಲರು ಫೆಬ್ರವರಿ 4, 1948 ರಂದು ಬಿಡುಗಡೆ ಮಾಡಿದ ಪ್ರಕಟಣೆ. ಪಟೇಲರ ಈ ಮಾತುಗಳನ್ನು ನಾವು ಸದಾ ಗಮನದಲ್ಲಿ ಇರಿಸಿಕೊಳ್ಳಬೇಕಿದೆ.

ಸಂವಿಧಾನಕ್ಕೆ, ರಾಷ್ಟ್ರಧ್ವಜಕ್ಕೆ ನಿಷ್ಠರಾಗಿರುತ್ತೇವೆ ಎಂದು ಹೇಳಿ, ನಾಟಕವಾಡಿ ನಿಷೇಧವನ್ನು ತೆರವು ಮಾಡಿಸಿಕೊಂಡ ಆರ್‌ಎಸ್‌ಎಸ್ ನಂತರ ಮುಂದುವರೆಸಿದ್ದು ಅದೇ ಸಂವಿಧಾನ ವಿರೋಧಿ ಕೃತ್ಯಗಳನ್ನೇ. ಈ ನೂರು ವರ್ಷಗಳಲ್ಲಿ ಆರ್‌ಎಸ್‌ಎಸ್ ಈ ದೇಶಕ್ಕೆ ನೀಡಿದ ಕೇವಲ 10 ಕೊಡುಗೆಗಳನ್ನು ಹೇಳಲು ಬಿಜೆಪಿಗರಿಂದ ಮತ್ತು ಸಂಘಪರಿವಾರದವರಿಂದ ಸಾಧ್ಯವಾಗುವುದಿಲ್ಲ, ಇಂತಹ ಆರ್‌ಎಸ್‌ಎಸ್ ನಿಂದ ಅಪಾಯವಿದೆಯೇ ಹೊರತು ಸಹಾಯವಿಲ್ಲ.

ಸಂವಿಧಾನವನ್ನು ಒಪ್ಪದೆ ಕರಡು ಪ್ರತಿಯನ್ನು ಸುಟ್ಟು ಹಾಕಿದ್ದ, ರಾಷ್ಟ್ರಧ್ವಜವನ್ನು ಗೌರವಿಸದ, ಮಹಿಳೆಯರು, ಶೋಷಿತರನ್ನು ಮೂರನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುವ ಅಜೆಂಡಾ ಹೊಂದಿರುವ ಆರ್‌ಎಸ್‌ಎಸ್ ಕಾಂಗ್ರೆಸ್ಸಿಗೆ ಮಾತ್ರವಲ್ಲ ಈ ದೇಶದ ಐಕ್ಯತೆಗೆ ಪರಮ ಶತ್ರು ಎನ್ನುವುದನ್ನು ಪ್ರತಿ ದೇಶಭಕ್ತನೂ ಗಮನದಲ್ಲಿರಿಸಿಕೊಳ್ಳಬೇಕು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!