ಬೆಳಗಾವಿ: ಹಿಂಡಲಗಾ ಗ್ರಾಮದ ಲಕ್ಷ್ಮೀ ನಗರದ ಶ್ರೀರಾಮ ಕಾಲೋನಿಯಲ್ಲಿ ಪ್ರಭು ಶ್ರೀರಾಮ ಮಂದಿರದ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಸಮಾರಂಭದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಾಬಾಸಾಹೇಬ್ ಪಾಟೀಲ, ಗ್ರಾಮದ ಹಿರಿಯರು, ಶ್ರೀರಾಮ ಉತ್ಸವ ಕಮಿಟಿಯ ಸದಸ್ಯರು, ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.