Ad imageAd image

ಸಂಗೊಳ್ಳಿಗೆ ಹೋಗುವ ಮಾರ್ಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Bharath Vaibhav
ಸಂಗೊಳ್ಳಿಗೆ ಹೋಗುವ ಮಾರ್ಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
WhatsApp Group Join Now
Telegram Group Join Now

ಬೆಳಗಾವಿ: ರಾಜ್ಯದಲ್ಲಿ ಸಾಲು ಸಾಲು ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಂಗೊಳ್ಳಿಗೆ ಹೋಗುವ ಮಾರ್ಗದಲ್ಲಿ ರಸ್ತೆ ಬದಿಯ ಜೋಳದ ಜಮೀನಿನಲ್ಲಿ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ.ಕಿತ್ತೂರು ಪಟ್ಟಣದಿಂದ ಸಂಗೊಳ್ಳಿಗೆ ಹೋಗುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ.

ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಐದಾರು ದಿನಗಳ ಹಿಂದೆಯೆ ವ್ಯಕ್ತಿಯನ್ನು ಕೊಲೆಗೈದು ಗೋವಿನ ಜೋಳದ ಜಮೀನಿನಲ್ಲಿ ಎಸೆದು ಹೋಗಿರಬಹುದು ಪೊಲೀಸರು ಎಂದು ಶಂಕಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಕೆ. ರಾಮರಾಜನ್, ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೊಳ್ಳಿ, ಜಿ.ಜಿ. ಹಂಪಣ್ಣವರ ಹಾಗೂ ಸೋಕೋ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.y

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!