Ad imageAd image

ಧಾರವಾಡ:ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿಯಾದ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ

Bharath Vaibhav
ಧಾರವಾಡ:ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿಯಾದ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ
WhatsApp Group Join Now
Telegram Group Join Now

ಧಾರವಾಡ:  ಜಿಲ್ಲೆಯ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ, ಶಿವಳ್ಳಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳ, ಕಲಘಟಗಿ ತಾಲೂಕಿನ ಕುರುವಿನಕೊಪ್ಪ, ಸೂರಶೆಟ್ಟಿಕೊಪ್ಪ, ನವಲಗುಂದ ತಾಲೂಕಿನ ಶಿರಕೋಳ, ಯಮನೂರ ಹಾಗೂ ಕುಂದಗೋಳ ತಾಲೂಕಿನ ಹಿರೇಹರಕುಣಿ ಸೇರಿದಂತೆ ಎಂಟು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿ ಇರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ದೆಶಿಸಿದೆ.

ಏಪ್ರಿಲ್ 28, 2025 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 29, 2025 ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಮೇ 2, 2025 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಮೇ 11, 2025 ರಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಮತದಾನವನ್ನು ನಡೆಸಲಾಗುತ್ತದೆ. ಮರು ಮತದಾನ ಅವಶ್ಯವಿದ್ದರೆ, ಮತದಾನವನ್ನು ಮೇ 13, 2025 ರಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಜರುಗಿಸಲಾಗುವುದು.

ಮೇ 14, 2025 ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಮಾಡಲಾಗುತ್ತದೆ. ಮತ್ತು ಮೇ 14, 2025 ರಂದು ಚುನಾವಣಾ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲಾಗುತ್ತದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ-308 ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಏಪ್ರಿಲ್ 22, 2025 ರಿಂದ ಮೇ 14, 2025 ರವರೆಗೆ ಜಾರಿಯಲ್ಲಿರುತ್ತದೆ. ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಬಾರದೆಂದು ಉಪ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ಎಲ್ಲ ಮತದಾರರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ವರದಿ: ವಿನಾಯಕ ಗುಡ್ಡದಕೇರಿ

WhatsApp Group Join Now
Telegram Group Join Now
Share This Article
error: Content is protected !!