ಬೆಂಗಳೂರು : ಇದೇ ಜ.5ರಿಂದ ಬಸ್ ಟಿಕೆಟ್ ದರ ಏರಿಕೆಯಾಗಲಿದ್ದು, ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೂ ಈ ಹೊಸ ದರ ಅನ್ವಯಿಸಲಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ಸ್ಪಷ್ಟಪಡಿಸಿದರು.
ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವರ್ಷದ ಮೊದಲ ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಅವರು, ಬಸ್ ಟಿಕೆಟ್ ದರ ಶೇ.15ರಷ್ಟು ಹೆಚ್ಚಿಸಲಾಗಿದೆ.
ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ದರ ಏರಿಕೆಯಿಂದಾಗಿ ಪ್ರತಿದಿನ 7.84 ಕೋಟಿ ರೂಪಾಯಿ ಆದಾಯ ನಿರೀಕ್ಷೆ ಇದೆ ಎಂದರು.
ಈ ಮೊದಲ ನಾಲ್ಕು ಸಾರಿಗೆ ನಿಗಮಗಳಿಂದಲೂ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದನ್ನು ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಹೀಗಾಗಿ ಜ.5ರಿಂದ ಬಸ್ ಟಿಕೆಟ್ ಪ್ರಯಾಣದ ದರಗಳು ನಾಲ್ಕೂ ಸಾರಿಗೆ ಸಂಸ್ಥೆಗಳಲ್ಲಿಯೂ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.