ನವದೆಹಲಿ : ರಾಮನಗರ ಜಿಲ್ಲೆಗೆ ಹೊಸ ಹೆಸರು ನಾಮಕರಣ ಮಾಡುವ ಮಹತ್ವಾಕಾಂಕ್ಷಿ ಯೋಜನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣದ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.ಇದ್ರಿಂದಾಗಿ ಡಿಸಿಎಂ ಡಿಕೆಶಿಗೆ ತೀವ್ರ ಹಿನ್ನಡೆಯಾಗಿದೆ.ಕೇಂದ್ರದ ಈ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಶಾಕ್ ಎದುರಾಗಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕನಸಿಗೆ ಕೇಂದ್ರ ಸರ್ಕಾರ ತಣ್ಣೀರು ಎರಚಿದ್ದು, ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ತಿರಸ್ಕರಿಸಿದೆ.ನೂತನ ಹೆಸರು ನಾಮಕರಣ ಪ್ರಸ್ತಾಪ ಏಕೆ ತಿರಸ್ಕಾರವಾಯಿತು ಎಂದು ನಿಖರ ಕಾರಣ ತಿಳಿದುಬಂದಿಲ್ಲ.