Ad imageAd image

ಕಾಂಗ್ರೆಸ್ ಸರಕಾರ ಡಾ.ಬಿ.ಆರ್. ಅಂಬೇಡ್ಕರ ಅವರ ಆಶಯದಂತೆ ನಡೆದುಕೊಂಡು ಬಂದಿದೆ ಶಾಸಕ ಅಶೋಕ ಪಟ್ಟಣ

Bharath Vaibhav
ಕಾಂಗ್ರೆಸ್ ಸರಕಾರ ಡಾ.ಬಿ.ಆರ್. ಅಂಬೇಡ್ಕರ ಅವರ ಆಶಯದಂತೆ ನಡೆದುಕೊಂಡು ಬಂದಿದೆ ಶಾಸಕ ಅಶೋಕ ಪಟ್ಟಣ
WhatsApp Group Join Now
Telegram Group Join Now

ರಾಮದುರ್ಗ :ತಾಲೂಕಿನ ಪಟ್ಟಣದ ಪುರಸಭೆ ಸಂಸ್ಕೃತ ಭವನದಲ್ಲಿ ತಾಲೂಕ ಆಡಳಿತ ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ವಿವಿಧ ದಲಿತ ಸಂಘಟನೆ ಸಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134 ನೇ ವಿಜಯೋತ್ಸವ ಕಾರ್ಯಕ್ರಮವನ್ನು ಅತಿ ವಿಜೃಂಭಣೆಯಿಂದ ನೆರ್ವೇರಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಡಾ.ಬಿ.ಆರ್. ಅಂಬೇಡ್ಕರ ಅವರ ಆಶಯದಂತೆ ನಡೆದುಕೊಂಡು ಬಂದಿದೆ. ಬಿಜೆಪಿಗರು ಅವರ ಸಂವಿಧಾನವನ್ನೇ ಬದಲಿಸುವ ಹೇಳಿಕೆ ನೀಡಿದ ಪರಿಣಾಮ ಅವರನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಮನೆಗೆ ಕಳಿಸಿದ್ದಾರೆ. ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಆರೋಪಿಸಿದರು.

ಶ್ರೀಮತಿ ಇಂದಿರಾ ಗಾಂಧಿಜೀಯವರ ಕಾಲದಿಂದಲೂ ಪರಿಶಿಷ್ಟ ಜಾತಿ ಹಾಗೂ ಪಂಗಡಗಳನ್ನು ಕಾಂಗ್ರೆಸ್ ಪಕ್ಷ ಪ್ರೋತ್ಸಾಹಿಸುತ್ತಲೇ ಬಂದಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಮಹಿಳೆಯರಿಗೆ ವಿಶೇಷ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿ, ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.

ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಸಮಾಜದಲ್ಲಿ ತುಳಿತಕ್ಕೆ ಒಳಗಾದ ಜನಾಂಗದ ಬಗ್ಗೆ ಹೋರಾಟ ಮಾಡಿದ ಡಾ. ಬಿ.ಆರ್. ಅಂಬೇಡ್ಕರ ಅವರ ಸ್ಮರಣೆಯ ಜೊತೆಗೆ ಅವರ ಜೀವನದ ಆದರ್ಶಗಳನ್ನು ಯುವ ಪೀಳಿಗೆ ಪಾಲಿಸಬೇಕು ಎಂದರು.

ಜಮಖಂಡಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಮಹಾಲಿಂಗಪ್ಪ ಅಲಬಾಳ ಮಾತನಾಡಿ, ಹಿಂದುಳಿದ ವರ್ಗದ ಜನತೆ, ಸ್ತ್ರೀಯರಿಗೆ ಸಮಾನತೆ ಒದಗಿಸಲು ಹಾಗೂ ಮನುಕುಲದ ಉದ್ಧಾರಕ್ಕಾಗಿ ಹೋರಾಟ ಮಾಡಿದ ಅಂಬೇಡ್ಕರ ಅವರನ್ನು ಕೇವಲ ಒಂದು ಜಾತಿಗೆ ವೈಸಬೇಡಿ ಅಂಬೇಡ್ಕರ್ ಅವರು ಎಲ್ಲ ಜಾತಿಗೆ ಸೀಮಿತ ಇನ್ನು ಅನೇಕ ಅಂಬೇಡ್ಕರ್ ಅವರ ಅವರ ಬಗ್ಗೆ ಪ್ರಸ್ತಾಪ ಮಾಡಿ ಮಾತನಾಡಿದರು.

ತಾ.ಪಂ. ಇಓ ಬಸವರಾಜ ಐನಾಪೂರ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ ಬಳಿಗಾರ, ಡಿವೈಎಸ್‌ಪಿ ಚಿದಂಬರ ಮಡಿವಾಳರ, ವಿವಿಧ ಇಲಾಖೆ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು ಸೇರಿದಂತೆ ಇತರರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶುರಾಮ ಪತ್ತಾರ ಸ್ವಾಗತಿಸಿ, ಸಂವಿಧಾನದ ಪೀಠಿಕೆ ಓದಿದರು. ವಿ.ಎಸ್. ಹಿರೇಮಠ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವರದಿ:ಮಂಜುನಾಥ ಕಲಾದಗಿ

WhatsApp Group Join Now
Telegram Group Join Now
Share This Article
error: Content is protected !!