ದಾವಣಗೆರೆ: ದಾವಣಗೆರೆ ತಾಲೂಕಿನ ಕಾಟೇಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಟೇಹಳ್ಳಿ ಗ್ರಾಮದ ನಾಗರಾಜ್(35), ಲತಾ(30) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ.
ಗುರುವಾರ ದಂಪತಿ ಜಮೀನಿಗೆ ತೆರಳಿದಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.ಕಳೆದ ರಾತ್ರಿ ಈ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದರಿಂದ ಜಮೀನಿನಲ್ಲಿ ನೀರು ನಿಂತಿತ್ತು. ಟಿಸಿ ಅಳವಡಿಸಿದ್ದ ವಿದ್ಯುತ್ ಕಂಬಗಳ ಗೈ ತಂತಿ ಮುಟ್ಟಿದ್ದರಿಂದ ದಂಪತಿ ವಿದ್ಯುತ್ ಶಾಕ್ ನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾ.ರೆ
ದಂಪತಿ ನಿಧನದಿಂದ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ. ತಂದೆ, ತಾಯಿ ಕಳೆದುಕೊಂಡ ಮಕ್ಕಳು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಶಾಸಕ ಕೆ.ಎಸ್. ಬಸವಂತಪ್ಪ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಮಕ್ಕಳಿಗೆ ಪರಿಹಾರ ನೀಡುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದ್ದಾರೆ.