ಚಾಮರಾಜನಗರ : ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳಿಗೆ ವಿಷಪ್ರಾಶನ ಮಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ಬಳಿ 20ಕ್ಕೂ ಹೆಚ್ಚು ಕೋತಿಗಳ ಮೃತದೇಹ ಪತ್ತೆಯಾಗಿದೆ.ವಿಷವಿಕ್ಕಿ ಮಂಗಗಳನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮಂಗಗಳನ್ನು ಬೇರೆಡೆ ಹತ್ಯೆ ಮಾಡಿ ಇಲ್ಲಿ ತಂದು ಬಿಸಾಕಿರುವ ಸಾಧ್ಯತೆ ಇದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಯಿಸಿದ್ದು ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.
ಗ್ರಾಮಸ್ಥರು ಮಂಗಗಳ ಮೃತದೇಹವನ್ನು ಗಮನಿಸಿ ಗುಂಡ್ಲುಪೇಟೆ ಪೊಲೀಸರ ಗಮನಕ್ಕೆ ತಂದಿದ್ದಾರೆ. ನಿಖರವಾಗಿ ಏನಾಗಿದೆ ಎಂಬುದು ಇನ್ನೂ ಕೂಡ ಸ್ಪಷ್ಟವಾಗಿಲ್ಲ. ಆದ್ರೆ ಮೇಲ್ನೋಟಕ್ಕೆ ಕೋತಿಗಳನ್ನು ವಿಷ ಹಾಕಿ ಕೊಂದಿರುವಂತೆ ಕಾಣುತ್ತಿದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ.




