ವಿಜಯನಗರ: ನಾಪತ್ತೆಯಾಗಿದ್ದ ಅಪ್ರಾಪ್ತ ಪ್ರೇಮಿಗಳು ಕಾಡಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹರಪನಹಳ್ಳಿಯಲ್ಲಿ ನಡೆದಿದೆ.
ಮದನ ಸ್ವಾಮಿ ಮತ್ತು ದೀಪಿಕಾ ಎಂಬ ಜೋಡಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಮದನ ಸ್ವಾಮಿ, ದೀಪಿಕಾ ಫಲಿತಾಂಶ ಪ್ರಕಟವಾದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರು ಕೂಡ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು. ಎಲ್ಲಿ ಹುಡುಕಾಡುಕಿದರು ಪತ್ತೆಯಾಗಿರಲಿಲ್ಲ. ಇದೀಗ ಕಾಡೊಂದರಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಒಂದೇ ಮರಕ್ಕೆ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.