ನಿಪ್ಪಾಣಿ: ಕಳೆದ ಐದು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನಲ್ಲಿಯ ಕೃಷ್ಣಾ ಹಾಗೂ ದೂದ ಗಂಗಾ ನದಿಗಳ ಪ್ರವಾಹ ಹೆಚ್ಚಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೇಗ್ ಹಾಗೂ ತಹಸೀಲ್ದಾರ್ ರಾಜೇಶ್ ಬುರ್ಲಿ ಉಪ ವಿಭಾಗಾಧಿಕಾರಿ ಸುಭಾಷ್ ಸಂಪಗಾವಿ, ಸೇರಿದಂತೆ ತಾಲೂಕ ಆಡಳಿತಾಧಿಕಾರಿಗಳು ಸದಲಗಾ, ಮಾಂಜರಿ, ಯಡೂರ್,ಗ್ರಾಮಗಳಿಗೆ ಭೇಟಿ ನೀಡಿ ದೂಧಗಂಗಾ ಹಾಗೂ ಕೃಷ್ಣಾ ನದಿಗಳ ಪ್ರವಾಹ ಪರಿಸ್ಥಿತಿ ಪರಿಶೀಲಿಸಿ ಮುಂಜಾಗ್ರತೆ ಕ್ರಮಕೈಗೊಳ್ಳುವಂತೆ ಪುರಸಭೆ, ಗ್ರಾಮ ಪಂಚಾಯತ್ ಸ್ಥಾನಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹಾಗೂ ಕೊಯ್ನಾ ಜಲಾಶಯದಿಂದ ನೀರು ಹರಿಬಿಡುತ್ತಿರುವುದರಿಂದ ದೂದಗಂಗಾ ಹಾಗೂ ಕೃಷ್ಣಾ ನದಿಗಳ ಒಳಹರಿವು ಹೆಚ್ಚಾಗುತ್ತಿದ್ದು ಪ್ರವಾಹ ಪರಿಸ್ಥಿತಿಯ ಸಮೀಕ್ಷೆ ನಡೆಸಿದರು.ಈ ಸಂಧರ್ಭದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ್, ಅಭಿನವ ಜೈನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ ಶಿಂಧೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮಹಾವೀರ ಚಿಂಚಣೆ




